

ಮಡಿಕೇರಿ ಮೇ 2 NEWS DESK : ಮುಂಬೈನ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ನಡೆದ 43ನೇ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಮಡಿಕೇರಿಯ ಬಂಗಾಡುಮನೆ ವಸಂತಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕವನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
4*100 ರಿಲೆಯಲ್ಲಿ ಚಿನ್ನದ ಪದಕ, 100 ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಹಾಗೂ 400 ಮೀ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಸಂತಿ ಅವರು, ಪ್ರಸ್ತುತ ಬಡ್ತಿ ಹೊಂದಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನಸಿರ್ಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು ಇಲ್ಲಿಯವರೆಗೆ ಅನೇಕ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ದಾಖಲೆ ಸಂಖ್ಯೆಯ ಪದಕಗಳನ್ನು ಗೆದ್ದಿದ್ದಾರೆ.








