ಸೋಮವಾರಪೇಟೆ ಮೇ 3 NEWS DESK : ಹಾನಗಲ್ಲುಬಾಣೆ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.
ಮೂರು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಗಂಗಾಪೂಜೆಯೊಂದಿಗೆ ಆರಂಭಗೊಂಡ ವಾರ್ಷಿಕ ಪೂಜೋತ್ಸವಲ್ಲಿ ಗಣಪತಿ ಹೋಮ, ಅಲಂಕಾರ ಸೇವೆ, ಮಹಾಮಂಗಳಾರತಿ, ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ದೇವಾಲಯ ಸಮಿತಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಗಣೇಶ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪೂಜೋತ್ಸವದ ಉಸ್ತುವಾರಿ ವಹಿಸಿದ್ದರು. ಶಾಸಕ ಡಾ. ಮಂತರ್ ಗೌಡ ಸೇರಿದಂತೆ ಇತರ ಪ್ರಮುಖರು ಇದ್ದರು.










