ಮಡಿಕೇರಿ ಮೇ 3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೇ 5 ರಂದು ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ನ 110ನೇ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ.
ನಗರದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಕಚೇರಿಯಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೆ.ಆರ್.ನಗರದ ಸಂತ ಅಂತೋಣಿ ಪ್ರೌಢಶಾಲೆಯ ಅಧ್ಯಾಪಕರಾದ ವಿಲ್ಫ್ರಡ್ ಕ್ರಾಸ್ತಾ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮ್ ಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ.