ಮಡಿಕೇರಿ ಮೇ 4 NEWS DESK : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 5 ರಿಂದ 7ರ ವರೆಗೆ ನಡೆಯಲಿದೆ.
ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ.
ಮೇ 5 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಮೇ 6 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ.
::: ನಾಗದರ್ಶನ :::
ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶದ ಪ್ರಯುಕ್ತ ಬೆಳಿಗ್ಗೆ 8 ಗಂಟೆಯಿಂದ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ನಡೆಯಲಿದ್ದು, ಪೂವಾಹ್ನ 11 ಗಂಟೆಗೆ ನಾಗದರ್ಶನ, ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಲಿದೆ.
ಉಡುಪಿಯ ಪೆರ್ಲಂಪಾಡಿ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಡಲಿದ್ದಾರೆ.
ಸಂಜೆ 7.30 ರಿಂದ ಶ್ರೀ ಪಾಷಾಣಮೂರ್ತಿ ದೈವ ಕೋಲ ನಡೆಯಲಿದೆ.
::: ಅಗೆಲು ಸೇವೆ :::
ರಾತ್ರಿ 7.30ರಿಂದ ಶ್ರೀ ಪಾಷಾಣಮೂರ್ತಿ ದೈವದ ಅಗೆಲು ಸೇವೆ ನಡೆಯಲಿದೆ. ಅಗೆಲು ಸೇವೆ ನೀಡುವ ಭಕ್ತರು ಒಂದು ದಿನ ಮುಂಚಿತವಾಗಿ ದೇವಾಲಯದಲ್ಲಿ ರಶೀದಿಯನ್ನು ಪಡೆದುಕೊಳ್ಳಬೇಕೆಂದು ಶ್ರೀಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ ಮನವಿ ಮಾಡಿದೆ ಮತ್ತು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದೆ.