ಮಡಿಕೇರಿ ಮೇ 5 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಭಾನುವಾರದ ಎರಡನೇ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ತಂಡಕ್ಕೆ ಪ್ರಗತಿ ಕ್ರಿಕೆಟರ್ಸ್ ತಂಡದ ವಿರುದ್ಧ 6 ವಿಕೆಟ್ಗಳ ಜಯ ಲಭಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಯುನೈಟೆಡ್ ತಂಡ 14.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ ಗಳನ್ನು ಗಳಿಸಿ ವಿಜಯ ದಾಖಲಿಸಿತು
50 ಬಾಲ್ ಗಳಲ್ಲಿ ಭರ್ಜರಿ 90 ರನ್ ಗಳನ್ನು ಗಳಿಸಿದ ಸಿ.ಆರ್.ಅಯ್ಯಪ್ಪ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
(ಮೇ 6ರ ಪಂದ್ಯ)
ಬೆಳಗ್ಗೆ 8.30
ಎಂಟಿಬಿ ರಾಯಲ್ಸ್- ಟೀಮ್ ಲಿವರೆಜ್
ಮಧ್ಯಾಹ್ನ 1.30
ಅಂಜಿಗೇರಿ ನಾಡ್- ಕೊಡವ ಟ್ರೈಬ್