ಮಡಿಕೇರಿ ಮೇ 5 NEWS DESK : ಮರ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯ ಎಡವಾರ ಗ್ರಾಮದ ನಿವಾಸಿ ಮಿತ್ರೇಶ್ (43) ಮೃತ ದುರ್ದೈವಿ.
ಭಾನುವಾರ ಮಧ್ಯಾಹ್ನ 12.30ರ ಸಮಯದಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡ ಮಿತ್ರೇಶ್ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.