ಮಡಿಕೇರಿ ಮೇ 6 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಸೋಮವಾರದ ಮೊದಲ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್ ತಂಡದ ವಿರುದ್ಧ ಟೀಮ್ ಲಿವರೇಜ್ 2 ವಿಕೆಟ್ ಗಳ ಜಯ ಸಾಧಿಸಿದೆ.
ಟಾಸ್ ಗೆದ್ದ ಟೀಮ್ ಲಿವರೇಜ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಎಂಟಿಬಿ ರಾಯಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಟೀಮ್ ಲಿವರೇಜ್ ತಂಡ 19.2 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗೆಲುವು ಸಾಧಿಸಿತು.
ಟೀಮ್ ಲಿವರೇಜ್ ತಂಡದ ಸಂಜು ಬೋಪಯ್ಯ ಅವರು 14 ರನ್ ಗಳನ್ನು ಗಳಿಸಿ, 29 ರನ್ ಗಳಿಗೆ 3 ವಿಕೆಟ್ ಗಳನ್ನು ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.