ಮಡಿಕೇರಿ ಮೇ 6 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂ.19 ರಿಂದ ಜೂ.21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.
ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಭಾಗವಹಿಸಲು ಅವಕಾಶವಿದೆ. ಅಲ್ಲದೇ ಈ ಸಮ್ಮೇಳನದಲ್ಲಿ ರಿಸರ್ಚ್ ಪೇಪರ್ ಮಂಡಿಸಬಹುದಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್ಗಳಿಗೆ ನಗದು ಬಹುಮಾನ ನೀಡಲಾಗುವುದು.
ಈ ಸಮ್ಮೇಳನದಲ್ಲಿ ಭಾಗವಹಿಸಲು ಜೂನ್, 10 ರೊಳಗೆಗೂಗಲ್ ಫಾರ್ಮ್ (https://forms.gle/QDXV64LDibFbHydc9) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರು (ಮೊ. 9845258894 ಮತ್ತು 9743084194) ಅಥವಾ ಅಕಾಡೆಮಿಯ ವೆಬ್ಸೈಟ್ www.kstacademy.in ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.