ಮಡಿಕೇರಿ ಮೇ 7 NEWS DESK : 2024-25ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ, 21 ಕೊನೆಯ ದಿನವಾಗಿದೆ. 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ್ ಎಜುಕೇಷನಲ್ ಇನ್ಸ್‍ಟ್ಯೂಷನ್ಸ್, ಪ್ರಶಾಂತಿ ನಿಲಯ ಪೊನ್ನಂಪೇಟೆ, ಸೌತ್ ಕೊಡಗು ಮತ್ತು ಸೆಂಟ್ ಜೋಸೆಪ್ಸ್ ಗಲ್ರ್ಸ್ ಕಾಂಪೋಸಿಟ್ ಪ್ರೌಢಶಾಲೆ, ಮಡಿಕೇರಿ ಇಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು.
ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).
ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ 9901482763, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 9482894676 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 9731259287 ಇಲ್ಲಿ ಸಂಪರ್ಕಿಸಿ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.