ಮಡಿಕೇರಿ ಮೇ 7 NEWS DESK : ಸಾಮಾಜಿಕ ಜಾಲತಾಣಗಳಲ್ಲಿ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ ವಿಡಿಯೋಗಳನ್ನು ಮಾರ್ಪಡಿಸಿ ನಿಜ ಎಂಬುವುದಾಗಿ ನಂಬಿಸಿ ಸಮುದಾಯಗಳ ನಡುವೆ ಭೇದ-ಭಾವ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಕಂಡುಬAದಿದೆ. ಇಂತಹ ಪ್ರಯತ್ನಗಳನ್ನು ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚುವ ಮೂಲಕ ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಸಮುದಾಯದ ವಿರುದ್ಧ ಸುಳ್ಳು ಸುದ್ದಿಗಳನ್ನು ಹಂಚಿಕೊಂಡು ಅಪ ಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಈಗಾಗಲೇ 2024 ನೇ ಸಾಲಿನಲ್ಲಿ 35 ವಿವಿಧ ರೀತಿಯ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಕೋಮು ಸೌಹಾರ್ದತೆಯನ್ನು ಕದಡುವ ರೀತಿಯ ವಿಡಿಯೋಗಳನ್ನು ಮಾಡುವುದು ಹಾಗೂ ವಿಡಿಯೋಗಳಲ್ಲಿನ ಧ್ವನಿ ಬದಲಾಯಿಸಿ ಶಾಂತಿ ಕದಡುವ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊAಡು ಅಪ ಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ದಲ್ಲಿ ಯಾವುದೇ ರೀತಿಯ ಸಂದೇಶ, ಭಾವಚಿತ್ರ, ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯಾಸತ್ಯತೆಯನ್ನು ಪರಿಶೀಲಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾವಹಿಸಲಾಗಿದೆ.
ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.