ಮಡಿಕೇರಿ ಮೇ 8 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಬುಧವಾರದ ಮೊದಲ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ತಂಡ ಟೀಮ್ ಲಿವರೇಜ್ ವಿರುದ್ಧ 14 ರನ್ ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 167 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಎದುರಾಳಿ ತಂಡ ಟೀಮ್ ಲಿವರೇಜ್ 18.2 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 153 ರನ್ ಗಳನ್ನಷ್ಟೇ ಗಳಿಸಿ ಸೋಲು ಒಪ್ಪಿಕೊಂಡಿತು.
ಪ್ರಗತಿ ಕ್ರಿಕೆಟರ್ಸ್ ನ ಅಭಿಮನ್ಯು ದೇವಯ್ಯ ಅವರು 36 ಬಾಲ್ ಗಳಲ್ಲಿ ಭರ್ಜರಿ 73 ರನ್ ಗಳನ್ನು ಗಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.