ಮಡಿಕೇರಿ ಮೇ 9 NEWS DESK : 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಕೊಡಗು ಶೇ. 88.67 ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನ ಪಡೆದುಕೊಂಡಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡಿಸಿದ ಸುದ್ದಿಗೋಷ್ಠಿಯಲ್ಲಿ, ರಾಜ್ಯದಲ್ಲಿ 6,31,204 ವಿದ್ಯಾರ್ಥಿಗಳು (76.91%) ಉತ್ತೀರ್ಣರಾಗಿದ್ದಾರೆ. ಉಡುಪಿ (94%) ಪ್ರಥಮ ಸ್ಥಾನ ಪಡೆದರೆ, ಕೊಡಗು ಮತ್ತು ಶಿವಮೊಗ್ಗ ಮೂರನೇ ಸ್ಥಾನವನ್ನು ಹಂಚಿಕೊಂಡಿದೆ. ಯಾದಗಿರಿ (50.59%) ಕೊನೆಯ ಸ್ಥಾನ ಪಡೆದಿದೆ.
ಬಾಗಲಕೋಟೆಯ ಅಂಕಿತಾ 625/625 ಪಡೆದುಕೊಂಡಿದ್ದು, 7 ವಿದ್ಯಾರ್ಥಿಗಳು 624/625 ಅಂಕಗಳನ್ನು ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಮೇಲುಗೈ ಸಾಧಿಸಿದ್ದು, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಸಾಧನೆ.
ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು.