ಮಡಿಕೇರಿ ಮೇ 9 NEWS DESK : ಹಾಸನದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿಲ್ಲವೆಂದು ಆರೋಪಿಸಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ನಗರದ ಗಾಂಧಿ ಮೈದಾನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೆ ಶಾಸಕ ಹೆಚ್.ಡಿ.ರೇವಣ್ಣ ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಜೆಡಿಎಸ್ ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್ ಗೌಡ ಮಾತನಾಡಿ, ಮಹಿಳೆಯರ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹರಿಬಿಟ್ಟಿರುವುದು ಕಾನೂನು ರೀತಿಯ ಅಪರಾಧವಾಗಿದೆ. ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು.
ಹೆಚ್.ಡಿ.ರೇವಣ್ಣ ಅವರ ವಿರುದ್ಧ ವಿನಾಕಾರಣ ಅಪಹರಣ ಪ್ರಕರಣವನ್ನು ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ಎಸ್‍ಐಟಿ ತಂಡ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದರೆ ವಿಡಿಯೋ ಹರಿಬಿಟ್ಟವರ ಮೇಲೆ ಯಾಕೆ ಎಫ್‍ಐಆರ್ ದಾಖಲಿಸಿಲ್ಲವೆಂದು ಪ್ರಶ್ನಿಸಿದರು.
ರಾಜ್ಯ ಸರಕಾರದ ಅಧೀನದ ಎಸ್‍ಐಟಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಅಣತಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು, ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಮತ್ತು ರೇವಣ್ಣ ಅವರ ಮೇಲೆ ಹೂಡಲಾಗಿರುವ ಪ್ರಕರಣವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ಕೋರ್ ಕಮಿಟಿ ಸದಸ್ಯರಾದ ಸಿ.ಎಲ್.ವಿಶ್ವ, ಪ್ರವೀಣ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಮೂಟೆರಾ ಪುಷ್ಪಾವತಿ ರಮೇಶ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಶಿರ್ ಮೂರ್ನಾಡು, ಜಿಲ್ಲಾ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಮಹಿಳಾ ಎಸ್.ಸಿ ಘಟಕದ ಅಧ್ಯಕ್ಷೆ ಹೆಚ್.ಬಿ.ಜಯಮ್ಮ, ಪ್ರಮುಖರಾದ ಗುಲಾಬಿ ಜನಾರ್ಧನ್, ರವಿ ಕಿರಣ್, ಸಿ.ಎಸ್.ನಾಗರಾಜು, ಕೋಟಿರಮಣ, ಕಾರ್ಮಾಡು ಸುಬ್ಬಣ್ಣ, ಸುರೇಶ್ ಕೋತೂರು, ಪಿ.ಎ.ಮಂಜುನಾಥ್, ಶರತ್ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಗುಡ್ಡೆಹೊಸೂರು : ರಾಷ್ಟ್ರೀಕೃತ ಬ್ಯಾಂಕ್ ಮಾದರಿಯ ಡಿಜಿಟಲೀಕರಣ ವ್ಯವಸ್ಥೆ ಸಹಕಾರಿ ಕ್ಷೇತ್ರದ ಬ್ಯಾಂಕಿಂಗ್ ನಲ್ಲೂ ಅತ್ಯಗತ್ಯ : ಎಂ.ಎಂ.ಶ್ಯಾಮಲ*
- *ರಾಷ್ಟ್ರೀಯ ಸಬ್ ಜೂನಿಯರ್ ಮಹಿಳಾ ಹಾಕಿ ತಂಡದ ಸೆಂಟರ್ ಫಾರ್ವರ್ಡ್ ಆಗಿ ಮಡಿಕೇರಿಯ ಅಕ್ಷರ*
- *ಸೋಮವಾರಪೇಟೆ : ಅಪ್ಪು ಅಭಿಮಾನಿಗಳ ಬಳಗದಿಂದ ಸಂಭ್ರಮದ ಮಕ್ಕಳ ದಿನಾಚರಣೆ : ಹಲವು ಸಾಧಕರಿಗೆ ಸನ್ಮಾನ*
- *ನಿಧನ ಸುದ್ದಿ*
- *ಮಡಿಕೇರಿ ಅಂಗನವಾಡಿಯಲ್ಲಿ ಬಾಲಮೇಳದಲ್ಲಿ ಮಿಂಚಿದ ಪುಟಾಣಿಗಳು*
- *ಮಡಿಕೇರಿಯ ಎಸ್ಎಸ್ ಆಸ್ಪತ್ರೆಯಿಂದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ : ಕಲಾಪ್ರತಿಭೆಗೆ ಸಾಕ್ಷಿಯಾದ ವಿದ್ಯಾರ್ಥಿಗಳು*
- *ಮಡಿಕೇರಿಯ ಹಿಂದೂಸ್ತಾನಿ ಶಾಲೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಲ್ಲಿ ದೇಶದ ಭವ್ಯ ಭವಿಷ್ಯ ಕಂಡ ನೆಹರು*
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*