ಮಡಿಕೇರಿ ಮೇ 9 NEWS DESK : ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಆದರೆ ಇಲ್ಲೊಂದು ಸರಕಾರಿ ಶಾಲೆಯ 10ನೇ ತರಗತಿಯಲ್ಲಿ ಒಬ್ಬಳೇ ವಿದ್ಯಾರ್ಥಿನಿ ಇದ್ದರೂ ಶಿಕ್ಷಕರು ಮನಮುಟ್ಟುವಂತೆ ಪಾಠ ಮಾಡಿ ಆಕೆ ತೇರ್ಗಡೆಯಾಗುವಂತೆ ಮಾಡಿದ್ದಾರೆ.
ಕೊಡಗಿನ ಕುಗ್ರಾಮಗಳಲ್ಲಿ ಒಂದಾದ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಸರಕಾರಿ ಪ್ರೌಢ ಶಾಲೆಯ ಏಕೈಕ ವಿದ್ಯಾರ್ಥಿನಿ ತೇರ್ಗಡೆಯಾಗುವುದರೊಂದಿಗೆ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ಗ್ರಾಮೀಣ ಭಾಗದ ಶಾಲೆಗಳಲ್ಲಿ ದಿನದಿಂದ ದಿನಕ್ಕೆ ದಾಖಲಾತಿ ಕುಸಿಯುತ್ತಿದೆ. ಇದೇ ಪರಿಸ್ಥಿತಿ ಸೂರ್ಲಬ್ಬಿ ಸರಕಾರಿ ಶಾಲೆಯಲ್ಲೂ ಇದ್ದು, 8, 9 ಮತ್ತು 10 ನೇ ತರಗತಿಗಳಲ್ಲಿ ಒಟ್ಟು 7 ವಿದ್ಯಾರ್ಥಿಗಳು ಮಾತ್ರ ಅಭ್ಯಾಸ ಮಾಡುತ್ತಿದ್ದರು. 10ನೇ ತರಗತಿಯಲ್ಲಿದ್ದ ಏಕೈಕ ವಿದ್ಯಾರ್ಥಿನಿ ಯು.ಎಸ್.ಮೀನ ಈ ಬಾರಿಯ ಪರೀಕ್ಷೆಯಲ್ಲಿ 314 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾಳೆ.
ಮಡಿಕೇರಿ ತಾಲ್ಲೂಕಿನ ಮುಟ್ಲು ಗ್ರಾಮದಿಂದ 5 ಕಿ.ಮೀ ದೂರದ ಶಾಲೆಗೆ ನಡೆದುಕೊಂಡು ಬರುತ್ತಿದ್ದ ಮೀನಾಳಿಗೆ ಶಿಕ್ಷಕ ವೃಂದ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು.
ಅಭಿಪ್ರಾಯ ಹಂಚಿಕೊAಡ ಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ತಿಮ್ಮಪ್ಪ ಅಂಟರದಾನಿ ಗ್ರಾಮೀಣ ಜನರು ಬೆಂಗಳೂರು ಇತ್ಯಾದಿ ಕಡೆ ಉದ್ಯೋಗ ಅರಸಿ ತೆರಳುತ್ತಿರುವುದರಿಂದ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ತೀವ್ರವಾಗಿ ಕುಸಿದಿದೆ. ಬರುವ ಶೈಕ್ಷಣಿಕ ವರ್ಷಕ್ಕೆ 10ನೇ ತರಗತಿಗೆ ನಾಲ್ವರು ವಿದ್ಯಾರ್ಥಿಗಳು ಹಾಗೂ 9 ನೇ ತರಗತಿ ಮತ್ತು 8 ನೇ ತರಗತಿಗೆ ತಲಾ ಮೂವರು ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದು, ಒಟ್ಟು 10 ವಿದ್ಯಾರ್ಥಿಗಳು ದಾಖಲಾಗಲಿದ್ದಾರೆ ಎಂದರು.
Breaking News
- *ಕನಕದಾಸರು ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು : ಶಾಸಕ ಡಾ.ಮಂತರ್ ಗೌಡ*
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿದೆ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*