ಮಡಿಕೇರಿ ಮೇ 10 NEWS DESK : ಗಾಂಧಿ ಯುವಕ ಸಂಘ ಕಂಡಕರೆ ಹಾಗೂ ಸರ್ವಧಮೀಯ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ “ಭರವಸೆಯ ನಾಯಕ” ಪ್ರಶಸ್ತಿಗೆ ಅಂತರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಜೂ.9 ರಂದು ಕಂಡಕೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣ ಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.