ನಾಪೋಕ್ಲು ಮೇ 10 NEWS DESK : ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುoಬಯ್ಯ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಹಾಗೂ ಅದರ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿನಿ ಹರ್ಷಿತ ರಕ್ತದಾನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿದರು. ಸುಮಾರು 41 ಯೂನಿಟ್ ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ವಿ.ಎ.ಯತೀಶ್, ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ, ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಕಲ್ಪನಾ ಸಾಮ್ರಾಟ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.