Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅವ್ಯವಸ್ಥೆಗಳ ವಿರುದ್ಧ ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ತೀವ್ರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅವ್ಯವಸ್ಥೆಗಳ ವಿರುದ್ಧ ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ತೀವ್ರ ಅಸಮಾಧಾನ*

ಮೇ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 13 NEWS DESK : ಸೋಮವಾರಪೇಟೆ ತಾಲ್ಲೂಕಿನ ಸರ್ವೆ ಇಲಾಖೆ ಮತ್ತು ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದೆ. ಲಂಚಕ್ಕಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಡಿ.ಕೆ.ಅರುಣ್ ಕುಮಾರ್ ಆರೋಪಿಸಿದ್ದಾರೆ.
ಹೋರಾಟ ಸಮಿತಿಯ ಪದಾಧಿಕಾರಿಗಳು ಕಂದಾಯ ಇಲಾಖೆಗೆ ತೆರಳಿ ಶಿರಸ್ತೇದಾರ್ ರಮೇಶ್ ಅವರನ್ನು ಭೇಟಿಯಾಗಿ ರೈತರಿಗೆ ಆಗುತ್ತಿರುವ ಕಿರುಕುಳದ ವಿವರಿಸಿ ಮನವಿ ಸಲ್ಲಿಸಿದರು. ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದರು.
ತಾಲ್ಲೂಕಿನ ಕಂದಾಯ ಗ್ರಾಮಗಳ ವಿಸ್ತೀರ್ಣ, ಗ್ರ್ಯಾಂಟ್, ದುರಸ್ತಿಯಾಗಿರುವ ಜಾಗ, ಖಾಲಿಯಿರುವ ಜಾಗದ ವಿಸ್ತೀರ್ಣವನ್ನು ಏಕರೆಯಲ್ಲಿ ನೀಡಬೇಕೆಂದು 2 ತಿಂಗಳ ಹಿಂದೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳು ನಿಯಮದಂತೆ ತಾಲ್ಲೂಕು ವ್ಯಾಪ್ತಿಯಲ್ಲಿ ಸಿಗಬೇಕು. ಬೇರೆ ಜಿಲ್ಲೆಯಿಂದ ಬಂದು ಹೋಗುವುದು ಸರಿಯಲ್ಲ. ನಿಗದಿತ ಸಮಯದಲ್ಲಿ ಕೆಲಸ ಮಾಡಿಕೊಡಬೇಕು. ಸಿ.ಸಿ.ಕ್ಯಾಮೆರಾ ಕಣ್ಗಾವಲಿನಲ್ಲಿ ಕೆಲಸ ಕಾರ್ಯಗಳು ನಡೆಯಬೇಕು. ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯವಾಗಬೇಕು ಎಂದು ಒತ್ತಾಯಿಸಿದರು.
ಮುಂದಿನ ದಿನಗಳಲ್ಲಿ ಕಂದಾಯ ಇಲಾಖೆಯ ಸಮಸ್ಯೆಗಳು ಬಗೆಹರಿಯದಿದ್ದರೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಅರುಣ್ ಕುಮಾರ್ ಎಚ್ಚರಿಕೆ ನೀಡಿದರು.
::: ಟ್ರಾಫಿಕ್ ಸಮಸ್ಯೆ :::
ಪೊಲೀಸ್ ಠಾಣೆಗೆ ತೆರಳಿದ ಸಮಿತಿ ಪದಾಧಿಕಾರಿಗಳು ಟ್ರಾಫಿಕ್ ಸಮಸ್ಯೆ ಬಗ್ಗೆ ಠಾಣಾಧಿಕಾರಿಗಳಾದ ರಮೇಶ್ ಕುಮಾರ್ ಹಾಗೂ ಪ್ರಹ್ಲಾದ್ ಅವರೊಂದಿಗೆ ಚರ್ಚಿಸಿದರು.
ಹಿಂದೆಲ್ಲಾ ಟ್ರಾಫಿಕ್ ವ್ಯವಸ್ಥೆ ಸರಿಯಿತ್ತು, ಇತ್ತೀಚಿನ ದಿನಗಳಲ್ಲಿ ಅವ್ಯವಸ್ಥೆ ಕಂಡು ಬಂದಿದೆ. ಎಲ್ಲೆಂದರಲ್ಲೆ ವಾಹನಗಳು ನಿಂತಿರುತ್ತವೆ, ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಲಾಗುತ್ತಿದೆ. ಸಾರ್ವಜಿನಿಕ ಸ್ಥಳದಲ್ಲಿ ಧೂಮಪಾನ ಮುಂದುವರಿದಿದೆ. ಬೈಕ್ ವ್ಹೀಲಿಂಗ್ ಮಾಡುವವರು ಹೆಚ್ಚಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸ್ ಅಧಿಕಾರಿಗಳು ಎಂದರೆ ಜನರಿಗೆ ಭಯಮಿಶ್ರಿತ ಗೌರವ ಇರಬೇಕು. ಅದನ್ನು ಅಧಿಕಾರಿಗಳು ಉಳಿಸಿಕೊಳ್ಳಬೇಕು ಎಂದು ಹೇಳಿದರು. ಗ್ರಾಮೀಣ ಭಾಗದಲ್ಲೂ ಪೊಲೀಸ್ ಬೀಟ್ ಹಾಕಬೇಕು. ಗ್ರಾಮಸಭೆ ನಡೆಸಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಬೇಕು ಎಂದು ಅರುಣ್ ಕುಮಾರ್ ಒತ್ತಾಯಿಸಿದರು.
ಚುನಾವಣಾ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳು ಬೇರೆ ಜಿಲ್ಲೆಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವುದಾಗಿ ಠಾಣಾಧಿಕಾರಿ ರಮೇಶ್ ಕುಮಾರ್ ಭರವಸೆ ನೀಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯಕ್ ಅವರೊಂದಿಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಚರ್ಚಿಸಿದರು. ಶೌಚಾಗೃಹ ಸರಿಪಡಿಸುವಂತೆ ಆಗ್ರಹಿಸಿದರು. ತಾಲ್ಲೂಕು ಕಚೇರಿಯ ಮುಂಭಾಗದ ರಸ್ತೆ ಬದಿಯಲ್ಲಿ ಮಣ್ಣು ಸುರಿದಿರುವುದರಿಂದ ವಾಹನ ನಿಲ್ಲಿಸಲು ಸಮಸ್ಯೆಯಾಗಿದೆ. ಅದನ್ನು ಕೂಡಲೆ ತೆರವುಗೊಳಿಸುವಂತೆ ಆಗ್ರಹಿಸಿದರು.
ಶೌಚಗೃಹದ ಸ್ವಚ್ಚತೆ ಹಾಗೂ ದುರಸ್ತಿ ಕಾಮಗಾರಿಯನ್ನು ಕೂಡಲೆ ಕೈಗೊಳ್ಳಲಾಗುವುದು. ರಸ್ತೆ ಬದಿಯ ಮಣ್ಣು ತೆರವುಗೊಳಿಸಿ, ಇಂಟರ್‍ಲಾಕ್ ಅಳವಡಿಸಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು. ಕಸವಿಲೇವಾರಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಅರೋಗ್ಯ ನಿರೀಕ್ಷಕ ಜಾಸಿಂ ಖಾನ್ ಭರವಸೆ ನೀಡಿದರು.
ಈ ಸಂದರ್ಭ ಸಮಿತಿ ಉಪಾಧ್ಯಕ್ಷ ಕೆ.ಎನ್.ದೀಪಕ್, ಪದಾಧಿಕಾರಿಗಳಾದ ಎಚ್.ಕೆ.ತ್ರಿಶೂಲ್, ಕೆ.ಎ.ಪ್ರಕಾಶ್, ಜಿ.ಎಂ.ಹೂವಯ್ಯ, ಆದರ್ಶ್, ಸಂದೀಪ್, ರಕ್ಷಿತ್, ಭರತ್, ಗೌತಮ್ ಕಿರಗಂದೂರು ಮತ್ತಿತರರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.