ನಾಪೋಕ್ಲು ಮೇ 14 NEWS DESK : ಜಿಲ್ಲೆಯ ವಿಶಿಷ್ಟ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಂದು ಜನಾಂಗದ ಪಾತ್ರ ಪ್ರಮುಖ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಕಕ್ಕಬೆಯ ಪ್ರೌಢಶಾಲಾ ಆಟದ ಮೈದಾನದಲ್ಲಿ ಕೊಡಗು ಕಣಿಯ ವಿದ್ಯಾ ಅಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಣಿಯ ಜನಾಂಗದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದವಾದ ವಿವಿಧ ಸಾಮೂದಾಯಗಳ ಸಂಖ್ಯೆಯು ಕಡಿಮೆ ಇದ್ದರೂ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಸಮುದಾಯವನ್ನು ಒಗ್ಗೂಡಿಸುವುದು ಹೆಮ್ಮೆಯ ವಿಷಯ. ಜಿಲ್ಲೆಯ ಪ್ರತಿಯೊಂದು ಜನಾಂಗವು ತನ್ನದೇ ಆದ ಆಚಾರ-ವಿಚಾರ ಪದ್ಧತಿ ಪರಂಪರೆಯನ್ನು ಹೊಂದಿದೆ. ಒಂದು ಜನಾಂಗವನ್ನು ಬಿಟ್ಟು ಜಿಲ್ಲೆ ಒಂದಾಗಲು ಸಾಧ್ಯವಿಲ್ಲ ಎಲ್ಲರೂ ಒಟ್ಟಾದರೆ ಮಾತ್ರ ಜಿಲ್ಲೆಯ ಸಂಸ್ಕೃತಿ ಆಚಾರ ವಿಚಾರ ಬೆಳೆಯಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಡಾ.ಮೇಚಿರ ಸುಭಾಷ್ ನಾಣಯ್ಯ , ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ನಪ್ಪ, ಬುಡಕಟ್ಟು ಜನಾಂಗದ ಅಧ್ಯಕ್ಷ ಕುಡಿಯರ ಮುತ್ತಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕಣಿಯ ವಿದ್ಯಾ ಅಭಿವೃದ್ಧಿ ಸಂಘದ ಅಧ್ಯಕ್ಷ ಚೆಂದುವಂಡ ದೇವಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಕಣಿಯರ ನಾಣಯ್ಯ ಉದ್ಘಾಟಿಸಿದರು.
ಈ ಸಂದರ್ಭ ಜನಾಂಗ ಬಾಂಧವರಿಗಾಗಿ ವಿವಿಧ ಕ್ರೀಡಾಕೂಟಗಳು ನqಯಿತು. ಮಕ್ಕಳು ಮಹಿಳೆಯರು ಸೇರಿದಂತೆ ಕಣಿಯ ಜನಾಂಗದ ಹಲವು ಮಂದಿ ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ವರದಿ : ದುಗ್ಗಳ ಸದಾನಂದ.