ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ 21ನೇ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭವು ಮೇ 21 ರಂದು ನಡೆಯಲಿದೆ.
ಅಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ(ಕುಶಾಲನಗರ ಹಾರಂಗಿ ರಸ್ತೆ) ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎಂ.ಪ್ರವೀಣ್‍ಕುಮಾರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಅಧ್ಯಾಪಕರು, ಸಾಹಿತಿ ಮಾರುತಿ ದಾಸಣ್ಣವರ್, ಕುಶಾಲನಗರ ಸಾಹಿತಿ ಮತ್ತು ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಸುನಿತಾ ಲೋಕೇಶ್, ಕುಶಾಲನಗರ ಸರ್ಕಾರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಸುನೀಲ್ ಕುಮಾರ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್.ಎನ್.ಮಂಜುನಾಥ್, ಕ.ಸಾ.ಪ.ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಕುಶಾಲನಗರ ತಾ. ಕ.ಸಾ.ಪ. ಅಧ್ಯಕ್ಷರಾದ ಕೆ.ಎಸ್.ನಾಗೇಶ್, ಪ್ರಶಸ್ತಿ ಪುರಸ್ಕøತರು ಮೂರ್ನಾಡು ಶಿಕ್ಷಕಿ, ಕವಯತ್ರಿ ಕೆ.ಜಿ.ರಮ್ಯ ಇತರರು ಪಾಲ್ಗೊಳ್ಳಲಿದ್ದಾರೆ.