Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *42 ಡೆಂಗ್ಯೂ, ನಾಯಿ ಕಡಿತ 3,144, ಹಾವು ಕಡಿತ 89, ಡಯೇರಿಯಾ 1,486 ಪ್ರಕರಣಗಳು*
ಇತ್ತೀಚಿನ ಸುದ್ದಿಗಳು

*42 ಡೆಂಗ್ಯೂ, ನಾಯಿ ಕಡಿತ 3,144, ಹಾವು ಕಡಿತ 89, ಡಯೇರಿಯಾ 1,486 ಪ್ರಕರಣಗಳು*

May 15, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರ್ವ ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. `ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 42 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ನಾಯಿ ಕಡಿತಕ್ಕೆ 3,144, ಹಾವು ಕಡಿತಕ್ಕೆ 89 ಮಂದಿ, ಬೇಧಿ(ಡಯೇರಿಯಾ) ಪ್ರಕರಣಗಳು 1,486, ಕಾಲರಾ 2 ಪ್ರಕರಣ, ಮಲೇರಿಯಾ 2 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಸಕಾಲದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.’ಡೆಂಗ್ಯೂ ಜ್ವರವು ವೈರಸ್‍ನಿಂದ ಉಂಟಾಗುವ ಖಾಯಿಲೆಯಾಗಿದ್ದು, ಈಡಿಸ್ ಈಜಿಪ್ಟೈ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈಡಿಸ್ ಸೊಳ್ಳೆಯು ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ. ಅವು ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ತೀವ್ರ ಜ್ವರ ಮತ್ತು ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸ ಖಂಡ/ ಕೀಲುಗಳಲ್ಲಿ ವಿಪರೀತ ನೋವು ಡೆಂಗ್ಯೂ ಜ್ವರದ ಲಕ್ಷಣವಾಗಿದೆ ಎಂದು ಡಾ.ಸತೀಶ್ ಕುಮಾರ್ ಮಾಹಿತಿ ನೀಡಿದರು. ತೀವ್ರ ಸ್ಥಿತಿಯ ಹಂತದಲ್ಲಿ ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತು ಕಂಡು ಬರುತ್ತದೆ ಎಂದು ತಿಳಿಸಿದರು. ಆಶಾ ಕಾರ್ಯಕರ್ತರು ಪ್ರತೀ 15 ದಿನಗಳಿಗೊಮ್ಮೆ ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಈಡಿಸ್ ಸೊಳ್ಳೆ ಲಾರ್ವಾ ಸೋರ್ಸ್ ರಿಡಕ್ಷನ್ ಕೈಗೊಳ್ಳುತ್ತಿದ್ದಾರೆ ಎಂದು ವಿವರಿಸಿದರು. ನಗರ ಪಟ್ಟಣ ವ್ಯಾಪ್ತಿಯಲ್ಲಿ ಪ್ರತೀ ಮಾಹೆಯ ಮೊದಲ ಮತ್ತು ಮೂರನೇ ವಾರ ಆಯಾಯ ತಾಲ್ಲೂಕಿನ ಎಲ್ಲಾ ಆರೋಗ್ಯ ಸಹಾಯಕರನ್ನು ನಿಯೋಜಿಸಿಕೊಂಡು ಮನೆಗಳಲ್ಲಿ ಈಡಿಸ್ ಸೊಳ್ಳೆ ಲಾರ್ವಾ ಸೋರ್ಸ್ ರಿಡಕ್ಷನ್ ಕೈಗೊಳ್ಳುತ್ತಿದ್ದಾರೆ ಎಂದು ಡಾ.ಸತೀಶ್ ಕುಮಾರ್ ಮಾಹಿತಿ ನೀಡಿದರು. ನಿಯಂತ್ರಣ ಕ್ರಮಗಳು ಲಾರ್ವಲ್ ಸರ್ವೆ ಮತ್ತು ಲಾರ್ವ ನಾಶ: ವರದಿಯಾದ ಡೆಂಗ್ಯೂ ಪ್ರಕರಣಗಳ ಸಂಬಂಧಿತ ಗ್ರಾಮಗಳಲ್ಲಿ ಮನೆಗಳ ಸರ್ವೆ ಮಾಡಿ ಲಾರ್ವೆ ಪತ್ತೆ ಮಾಡಿ ನಾಶಪಡಿಸಲಾಗಿದೆ ಎಂದರು. ಖಾಸಗಿ ಆಸ್ಪತ್ರೆ, ಲ್ಯಾಬ್ ಗಳಿಂದಲೂ ವರದಿ ಸಂಗ್ರಹಿಸಿ ಜ್ವರ ಪ್ರಕರಣ ಪತ್ತೆ ಮಾಡಲಾಗುತ್ತಿದೆ. ಸೆಂಟಿನೆಲ್ ಪ್ರಯೋಗಾಲಯದಲ್ಲಿ ಎಲೈಜಾ ವಿಧಾನದಲ್ಲಿ ಖಚಿತಪಡಿಸಲಾಗುತ್ತಿದೆ. ರ್ಯಾಪಿಡ್ ವಿಧಾನದಲ್ಲಿ ಪಾಸಿಟಿವ್ ಬಂದರೆ ಅದು ಶಂಕಿತ ಡೆಂಗ್ಯೂ ಮಾತ್ರವಾಗಿದ್ದು, ಆ ಗ್ರಾಮದಲ್ಲಿ ಪುನಃ ಸರ್ವೆ ಮಾಡಿ ಸೆಂಟಿನೆಲ್ ಲ್ಯಾಬ್‍ನಲ್ಲಿ ಖಚಿತಪಡಿಸಿಕೊಳ್ಳಲಾಗುತ್ತಿದೆ. ಶಂಕಿತ/ ಖಚಿತ ಪ್ರಕರಣಗಳು ವರದಿಯಾದ ಎಲ್ಲಾ ಗ್ರಾಮಗಳಲ್ಲಿ ಲಾರ್ವಲ್ ಸರ್ವೆ ಮತ್ತು ಜ್ವರ ಸಮೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನುಡಿದರು. ಮಾರ್ಗಸೂಚಿ: ಡೆಂಗ್ಯೂ ಜ್ವರ ಎಲೈಜಾ ವಿಧಾನದಲ್ಲಿ ಪಾಸಿಟಿವ್ ಎಂದು ವರದಿಯಾದಾಗ ಮಾತ್ರ ಅದು ಖಚಿತ ಡೆಂಗ್ಯೂ (ರ್ಯಾಪಿಡ್ ಕಿಟ್ ವಿಧಾನದಲ್ಲಿ ಪಾಸಿಟಿವ್ ಎಂದು ಕಂಡುಬಂದರೆ ಅದು ಶಂಕಿತ ಮಾತ್ರ). ಎಲೈಜಾ ವಿಧಾನದ ಪರೀಕ್ಷೆ ಡಿಎಚ್‍ಒ ಕಚೇರಿಯ ಸೆಂಟಿನೆಲ್ ಲ್ಯಾಬ್‍ನಲ್ಲಿ ಮಾತ್ರ ಇದೆ. ಖಚಿತಪಡಿಸಿಕೊಳ್ಳಲು ಸ್ಯಾಂಪಲ್‍ಗಳನ್ನು ಅಲ್ಲಿಗೇ ಕಳಿಸಬೇಕು. ಪ್ಲೇಟ್‍ಲೆಟ್ ಕಡಿಮೆ ಇದ್ದು ರ್ಯಾಪಿಡ್ ಕಾರ್ಡ್ ವಿಧಾನದಲ್ಲಿ ಪಾಸಿಟಿವ್ ಎಂದು ವರದಿಯಾಗಿದ್ದರೂ ಎಲೈಜಾ ವಿಧಾನದಲ್ಲಿ ಪರೀಕ್ಷೆಯಾಗಿ ಪಾಸಿಟಿವ್ ಎಂದು ವರದಿಯಾಗಿಲ್ಲದಿದ್ದರೆ ಅದನ್ನು ಶಂಕಿತ ಡೆಂಗ್ಯೂ ಎಂದಷ್ಟೇ ನಮೂದಿಸಲಾಗುವುದು ಎಂದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಜಿಲ್ಲೆಯ ಎಲ್ಲೆಡೆ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತೆ ನಿರ್ದೇಶನ ನೀಡಿದರು.ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಸಮಗ್ರ ರೋಗಗಳ ಕಣ್ಗಾವಲು ಘಟಕದ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ವಿವಿಧ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮೇ 21 ರಂದು ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ*
Next Article *ರಾಸಲೀಲೆ ಪ್ರಕರಣ : 16 ಬೇಡಿಕೆಗಳು*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.