
- ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ.
- ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು.
- ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
- ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು.
- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು.
- ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು.
- ಕಾರು ಚಾಲಕ ಕಾರ್ತಿಕ್ನನ್ನು ಕೂಡಲೇ ಬಂಧಿಸಬೇಕು.
- ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
- ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ದಾಖಲಿಸಬೇಕು.
- ವಿಡಿಯೋ ಕುರಿತು ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿಲ್ಲದ ಕಾರಣ ಅವರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು.
- ವಿಡಿಯೋ ಹಳೆಯದು ಎಂದು ಎಚ್ಡಿ ರೇವಣ್ಣ ಹೇಳಿದ್ದಾರೆ. ಅಷ್ಟು ವರ್ಷ ನಡೆಯುತ್ತಿರುವ ಲೈಂಗಿಕ ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ಧಮೆ ಹೂಡಬೇಕು.
- ಆರೋಪಿ ದೇಶ ಬಿಟ್ಟು ಹೋಗಲು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.
- ಪ್ರಜ್ವಲ್ ರೇವಣ್ಣ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು.
- ಹೆಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು.
- ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ ಡಿ ರೇವಣ್ಣ ಅವರ ವಿಧಾನಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು.
- ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಸರ್ಕಾರಿ ಬಂಗ್ಲೆಯನ್ನು ಅಪರಾಧ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು.
- ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳುಳ್ಳ ಪತ್ರವನ್ನು ಸಾಹಿತಿಗಳು ಬರೆದಿದ್ದಾರೆ.



Breaking News
- *ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*
- *ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ಮಹಿಳಾ ಸಮಿತಿಯ ಕೊಡಗು ಜಿಲ್ಲಾ ಸದಸ್ಯರಾಗಿ ವೀಣಾ ಹೊಳ್ಳ ನೇಮಕ*
- *ಪ್ರಾಮಾಣಿಕತೆ ಮೆರೆದ ಪೆಟ್ರೋಲ್ ಬಂಕ್ ಸಿಬ್ಬಂದಿ*
- *ಕೊಡಗು ಅಬ್ಬಾ ! ಚಳಿ ಚಳಿ ತಾಳೆನು…. ಕೆಲವರಿಗೆ ಇದು ಅಪಾಯಕಾರಿ*
- *ಸೋಮವಾರಪೇಟೆ ತಾಲ್ಲೂಕು ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ*
- *ಅಧಿಕಾರಿಗಳನ್ನು ರಸ್ತೆಯಲ್ಲೇ ತಡೆದು ತರಾಟೆಗೆ ತೆಗೆದುಕೊಂಡ ಕೂತಿ ಗ್ರಾಮಸ್ಥರು*
- *ತೇಗದ ಮರ ಕಡಿದು ಅಕ್ರಮ ಸಾಗಾಟ : ಓರ್ವನ ಬಂಧನ, ಐವರು ಪರಾರಿ*
- *ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ಪ್ರಥಮ*
- *ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾ ಕೇಂದ್ರ ಸಮಿತಿಗೆ ಸಂಪತ್ ಕುಮಾರ್*
- *ಮುಕೋಡ್ಲು ಹಾಗೂ ಹಮ್ಮಿಯಾಲದಲ್ಲಿ ಅರಿವು ಕಾರ್ಯಕ್ರಮ : ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು : ಪ್ರಸನ್ನ ಕುಮಾರ್*








