ಮಡಿಕೇರಿ ಮೇ 16 NEWS DESK : ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೀನಾಳ ಪೋಷಕರಿಗೆ ವೈಯಕ್ತಿಕ ಪರಿಹಾರ ನೀಡಿದ ಸಚಿವರು, ನೀತಿ ಸಂಹಿತೆ ಸಡಿಲವಾದ ಬಳಿಕ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಪ್ರಮುಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.