ಮಡಿಕೇರಿ ಮೇ.16 NEWS DESK : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ವಿರಾಜಪೇಟೆ :: ವಿರಾಜಪೇಟೆ 66/11 ಕೆವಿ ವಿದ್ಯುತ್ ಉಪ–ಕೇಂದ್ರದಿಂದ ಹೊರಹೋಗುವ ವಿಎಫ್ 7 ಹೆಗ್ಗಳ, ಫೀಡರ್ನ ಎಚ್ಟಿ/ಎಲ್ಟಿ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ವಿರಾಜಪೇಟೆ ಪಟ್ಟಣ, ಮಲಬಾರ್ ರಸ್ತೆ, ಆರ್ಜಿ ಬೇಟೋಳಿ, ಹೆಗ್ಗಳ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.