ಮಡಿಕೇರಿ ಮೇ 16 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಡಾ. ಧನಂಜಯ್ ಸರ್ಜಿ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು.