Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್*

ಮೇ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 17 NEWS DESK : ಕರ್ನಾಟಕ ಲೋಕಾಯುಕ್ತದ ಮಡಿಕೇರಿ ಡಿವೈಎಸ್‍ಪಿ ಪವನ್ ಕುಮಾರ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯು ನಡೆಯಿತು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ಲೋಕಾಯುಕ್ತ ಡಿವೈಎಸ್‍ಪಿ ಅವರ ಮುಂದೆ ಮಂಡಿಸಿದರು.
ಜಾತಿ, ಆದಾಯ ಸೇರಿದಂತೆ ವಿವಿಧ ಪ್ರಮಾಣ ಪತ್ರ ಪಡೆಯಲು ಹರಸಾಹಸ ಪಡಬೇಕಿದೆ ಎಂದು ಸಾರ್ವಜನಿಕರೊಬ್ಬರು ದೂರಿದರು.
ಸಕಾಲದಲ್ಲಿ ಇಷ್ಟು ದಿನದೊಳಗೆ ಪ್ರಮಾಣ ಪತ್ರ ನೀಡಬೇಕು ಎಂಬ ಆದೇಶ ಇದ್ದರೂ ಸಹ, ಸತಾಯಿಸುತ್ತಿದ್ದಾರೆ. ಜಾತಿ, ಆದಾಯ ಮತ್ತಿತರ ಪ್ರಮಾಣ ಪತ್ರ ಪಡೆಯಲು ಅಗತ್ಯ ದಾಖಲಾತಿಯ ಮಾಹಿತಿ ಫಲಕವನ್ನು ಅಳವಡಿಸಿದ್ದಲ್ಲಿ ಒದಗಿಸಲಾಗುವುದು, ಆದರೆ ಸತಾಯಿಸುವುದು ಏಕೆ ಎಂದು ಸಾರ್ವಜನಿಕರೊಬ್ಬರು ಅವಲತ್ತುಕೊಂಡರು.
ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಯಾರು ಸತಾಯಿಸುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಲೋಕಾಯುಕ್ತ ನಿಯಮನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೊಂದು ಗಂಭೀರ ವಿಚಾರವಾಗಿದ್ದು, ಯಾರನ್ನು ಸಹ ಸತಾಯಿಸದೆ ಗೌರವದಿಂದ ಕಾಣಬೇಕು. ಪ್ರಮಾಣ ಪತ್ರ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಇದ್ದಲ್ಲಿ, ಹಿಂಬರಹವನ್ನಾದರೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಾಗದ ಖಾತೆಗೆ ಸಂಬಂಧಿಸಿದಂತೆ ಸುಮಾರು ನಾಲ್ಕು ದಶಕಗಳಿಂದ ಓಡಾಡಿದರೂ ಸಹ ಖಾತೆ ಬದಲಾವಣೆ ಆಗಿಲ್ಲ. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರೊಬ್ಬರು ಮನವಿ ಮಾಡಿದರು.
ಖಾತೆ ಬದಲಾವಣೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ನಾಲ್ಕು ದಶಕವಾದರೂ ಸಹ ಖಾತೆ ಸರಿಪಡಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಲೋಕಾಯುಕ್ತ ಡಿವೈಎಸ್‍ಪಿ ಅವರು ಕೆಲವು ಇಲಾಖೆಗಳಲ್ಲಿ ಇದ್ದಕ್ಕಿದ್ದ ಹಾಗೆ ಕಡತಗಳು ನಾಪತ್ತೆಯಾಗುತ್ತವೆ ಹೇಗೆ ಎಂದು ಪ್ರಶ್ನಿಸಿದರು.
ಪಡಿತರ ಚೀಟಿ ಕೊಡಿಸುವಂತೆ ಲೋಕಾಯುಕ್ತ ಡಿವೈಎಸ್‍ಪಿ ಅವರಲ್ಲಿ ಸಾರ್ವಜನಿಕರೊಬ್ಬರು ಮನವಿ ಮಾಡಿದರು. ವಿವಿಧ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಸಾರ್ವಜನಿಕರಿಗೆ ನೇರವಾಗಿ ಕೆಲಸಗಳು ಆಗುವಂತಾಗಬೇಕು. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವಂತಾಗಬೇಕು ಎಂದರು.
ಈ ಕುರಿತು ಪ್ರತಿಕ್ರಿಯಿಸಿದ ಲೋಕಾಯುಕ್ತ ಡಿವೈಎಸ್‍ಪಿ ಅವರು ಸಾರ್ವಜನಿಕರನ್ನು ಗೌರವಯುತವಾಗಿ ಮಾತನಾಡಿಸಿದಲ್ಲಿ ಅರ್ಧ ಕೆಲಸಗಳು ಬಗೆ ಹರಿಯುತ್ತವೆ. ನಂತರ ಅವರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಬಹುದು ಎಂದರು.
ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ದೂರುಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆ, ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ ಎಂದರು.
‘ಪ್ರತಿಯೊಬ್ಬರಲ್ಲಿಯೂ ಆಸೆ ಇರಬೇಕು. ಆದರೆ ದುರಾಸೆ ಇರಬಾರದು. ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ ಅಧಿಕಾರಿಗಳ ಮಕ್ಕಳು ಸಮಾಜದಲ್ಲಿ ಒಳ್ಳೆಯವರಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಇದನ್ನು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಬೇಕು ಎಂದು ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ನುಡಿದರು.’ ತಹಶೀಲ್ದಾರರಾದ ರಮೇಶ್ ಬಾಬು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.