ನಾಗಮಂಗಲ ಮೇ 17 NEWS DESK : ಕಾಡು ಹಂದಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಪುತ್ರ ಶಿವು (48) ಮೃತ ದುರ್ದೈವಿ. ಮಂಡ್ಯ- ನಾಗಮಂಗಲ ರಸ್ತೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದಾಗ ಏಕಾಏಕಿ ಕಾಡು ಹಂದಿ ದಾಳಿ ಮಾಡಿದೆ. ಈ ಸಂದರ್ಭ ಕೆಳಗೆ ಬಿದ್ದ ಶಿವು ಅವರ ತೊಡೆ ಮತ್ತು ಮರ್ಮಾಂಗಕ್ಕೆ ಹಂದಿ ಗುದ್ದಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಶಿವು ಸಂಬಂಧಿಕರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಾಗಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.