Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ : ಮರಗಳ ಸರ್ವೆಗೆ ತೀವ್ರ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ : ಮರಗಳ ಸರ್ವೆಗೆ ತೀವ್ರ ವಿರೋಧ*

ಮೇ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಮರಗಳ ಸರ್ವೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗುತ್ತಿರುವ ಬಗ್ಗೆ ಅರಿವಿದ್ದರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉದ್ದೇಶ ಪೂರ್ವಕವಾಗಿಯೇ ಇಂದು ಬೆಂಗಳೂರಿನ ಸಭೆಯ ನೆಪದಲ್ಲಿ ಗೈರು ಹಾಜರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಖಾಸಗಿ ಜಮೀನುಗಳಲ್ಲಿನ ಮರಗಳ ಸರ್ವೇ ಸುತ್ತೋಲೆ ಹಿಂದಕ್ಕೆ ಪಡೆಯಬೇಕೆನ್ನುವ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಹೋರಾಟಕ್ಕೂ ಸಿದ್ಧವೆಂದು ಎಚ್ಚರಿಕೆ ನೀಡಿದರು.
ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನತೆಗೆ ಒಂದಿಲ್ಲ ಒಂದು ಕಿರುಕುಳವನ್ನು ನೀಡುತ್ತಲೆ ಬರುತ್ತಿದೆ. ಖಾಸಗಿ ಜಾಗಗಳಲ್ಲಿನ ಮರಗಳ ಸರ್ವೇ ಕಾರ್ಯಕ್ಕೆ ಇಲಾಖಾಧಿಕಾರಿಗಳು ಸುತ್ತೋಲೆ ಹೊರಡಿಸಿ ಅನಗತ್ಯ ತೊಂದರೆಯನ್ನು ನೀಡಲು ಮುಂದಾಗಿದ್ದಾರೆ. ಜಿಲ್ಲೆಯ ಸಿ ಮತ್ತು ಡಿ ದರ್ಜೆಯ ಜಾಗಗಳಲ್ಲಿ ತಲೆ ತಲಾಂತರಗಳಿಂದ ಬದುಕು ಕಟ್ಟಿಕೊಂಡು ಬಂದವರಿಗೆ ಹಕ್ಕುಪತ್ರ ನೀಡುವ ಹಂತದಲ್ಲಿ ಅರಣ್ಯ ಇಲಾಖೆ ತಡೆಯೊಡ್ಡುತ್ತಿದೆ. ಜಿಲ್ಲೆಯಲ್ಲಿ ಧಾರ್ಮಿಕ ಆಚರಣೆಗಳ ಭಾಗವಾಗಿ ವನ್ಯ ಜೀವಿಗಳ ಕೊಂಬುಗಳನ್ನು, ಗರಿಗಳನ್ನು ಬಳಸಲಾಗುತ್ತಿದೆ. ಇದೀಗ ಇವುಗಳನ್ನು ಇಲಾಖೆಯ ವಶಕ್ಕೆ ನೀಡಬೇಕೆನ್ನುವ ಆದೇಶವನ್ನು ಹೊರಡಿಸುವ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಧಾರ್ಮಿಕ ಆಚರಣೆಗಳಿಗೆ ಬಳಸುವ ವನ್ಯಜೀವಿಗಳ ಕೊಂಬು, ಗರಿಗಳು ಈಗ ಸಂಗ್ರಹಿಸಿದ್ದಲ್ಲ, ಅದು ತಲೆ ತಲಾಂತರಗಳಿಂದ ಬಂದಿರುವ ವಸ್ತುಗಳಾಗಿದ್ದು, ಅವುಗಳನ್ನು ತಮ್ಮ ಬಳಿಯೇ ಇರಿಸಿಕೊಳ್ಳಲು ಅವಕಾಶ ಕಲ್ಪಿಸಲೇಬೇಕೆಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಜಿಲ್ಲೆಯ ಬೆಳೆಗಾರರು ತಮ್ಮ ಜಾಗಗಳಲ್ಲಿನ ಮರಗಳನ್ನು ತಲೆ ತಲಾಂತರಗಳಿಂದ ಸಂರಕ್ಷಿಸಿಕೊಂಡು ಬಂದಿದ್ದಾರೆ. ಇದೀಗ ಇಂತಹ ಮರಗಳ ಸರ್ವೇ ಕಾರ್ಯ ಮಾಡುವುದೇಕೆಂದು ಪ್ರಶ್ನಿಸಿ, ಕೇರಳದ ಗಡಿ ಭಾಗದಲ್ಲಿರುವ ಅರಣ್ಯದ ಸುಮಾರು ಒಂದು ಕಿ.ಮೀ.ನಷ್ಟು ಭಾಗದಲ್ಲಿ ವ್ಯಾಪಕ ಮರಹನನವಾಗಿ ಜಾಗ ಖಾಲಿಯಾಗಿದೆ. ಅಂತಹ ಪ್ರದೇಶಗಳಲ್ಲಿನ ಮರಗಳ ಸಂರಕ್ಷಣೆಗೆ ಮುಂದಾಗದ ಅರಣ್ಯ ಇಲಾಖೆ ಖಾಸಗಿ ಜಾಗದ ಮರಗಳ ಸರ್ವೇಗೆ ಮುಂದಾದಲ್ಲಿ ಅವರನ್ನು ಹಿಂದಕ್ಕೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನಿಲ್ ಸುಬ್ರಮಣಿ, ಎಸ್.ಜಿ.ಮೇದಪ್ಪ, ಪ್ರಮುಖರಾದ ಕೋಡಿ ಪೊನ್ನಪ್ಪ, ರೀನಾ ಪ್ರಕಾಶ್, ಡಾ.ಬಿ.ಸಿ.ನವೀನ್ ಕುಮಾರ್ ಮಾತನಾಡಿ ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಅರಣ್ಯ ಇಲಾಖಾ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮೂಲಕ ರಾಜ್ಯಪಾಲರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮನವಿ ಸಲ್ಲಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಶಾಂತೆಯಂಡ ರವಿ ಕುಶಾಲಪ್ಪ, ನಾಗೇಶ್ ಕುಂದಲ್ಪಾಡಿ, ಬಲ್ಲಾರಂಡ ಮಣಿ ಉತ್ತಪ್ಪ, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.