Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಧನಂಜಯ ಸರ್ಜಿ ಅವರನ್ನು ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳುಹಿಸಿ : ಡಾ.ನಾಗರಾಜ್ ಮನವಿ* 
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಡಾ.ಧನಂಜಯ ಸರ್ಜಿ ಅವರನ್ನು ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳುಹಿಸಿ : ಡಾ.ನಾಗರಾಜ್ ಮನವಿ* 

ಮೇ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶಿವಮೊಗ್ಗ ಮೇ 18 NEWS DESK : ನಗರದ ಪಿಇಎಸ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪಿಎಸ್ ಕಾಲೇಜಿನ ಆಡಳಿತ ಸಂಯೋಜಕರಾದ ಡಾ. ನಾಗರಾಜ್ ಮಾತನಾಡಿ, ಡಾ. ಧನಂಜಯ ಸರ್ಜಿ ಅವರು ರಾಜ್ಯದ ಹೆಸರಾಂತ ಮಕ್ಕಳ ತಜ್ಞರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಬಾರಿ ಹೇಳುತ್ತಲೇ ಇರುತ್ತಾರೆ , ಅಂತೆಯೇ ಡಾ. ಧನಂಜಯ ಸರ್ಜಿ ಇಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಮ್ಮ ಮುಂದಿದ್ದಾರೆ. ಕೃಷಿ ಮತ್ತು ವ್ಯಾಪಾರ ಕುಟುಂಬದ ಹಿನ್ನೆಲೆಯಲ್ಲಿ ಬಂದ ಸರ್ಜಿ, ಉತ್ತಮ ಸೇವೆ ಸಲ್ಲಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಮೂಲಕ  ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸರ್ಜಿ ಅವರಿಗೆ ಮತ ಹಾಕುವುದರ ಮೂಲಕ ಈ ಬಾರಿ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮನವಿ ಮಾಡಿದರು. ರಾಜ್ಯ ಪ್ರಕೋಸ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ನೈರುತ್ಯ ಪದವೀಧರ ಕ್ಷೇತ್ರದಲ್ಲಿ  ಬಿಜೆಪಿ ಗೆದ್ದಿದೆ. ಈ ಹಿಂದೆ ನೈರುತ್ಯ ಪದವೀಧರ ಕ್ಷೇತ್ರವನ್ನು ಡಿ. ಎಚ್. ಶಂಕರಮೂರ್ತಿಯವರು  ಪ್ರತಿನಿಧಿಸುತ್ತಿದ್ದರು  ಈ ಬಾರಿ ಡಾ. ಧನಂಜಯ ಸರ್ಜಿ ಅವರಿಗೆ ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ನಾವೆಲ್ಲರೂ ಸರ್ಜಿ ಅವರ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದರು. ಈ ಚುನಾವಣೆಯಲ್ಲಿ ಇವಿಎಂ ಇರುವುದಿಲ್ಲ, ಬದಲಾಗಿ ಬ್ಯಾಲೆಟ್ ಪೇಪರ್ ಇರುತ್ತದೆ, ತಾವೆಲ್ಲರೂ ಡಾ.ಧನಂಜಯ ಸರ್ಜಿ  ಹೆಸರಿನ ಮುಂದೆ ಒಂದು ಗೆರೆ ಎಳೆಯುವ ಮೂಲಕ ಮೊದಲ ಪ್ರಾಶಸ್ತ್ಯ ದ ಮತವನ್ನು ಹಾಕಬೇಕು. ಮಧ್ಯ ಕರ್ನಾಟಕದ ಭಾಗದಲ್ಲಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಡಾ.ಸರ್ಜಿ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹೋದರೆ ಪದವೀಧರರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಫಲರಾಗುತ್ತಾರೆ ಎಂದು ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಹೆಸರು ಇರುವುದಿಲ್ಲ, ಉಸಿರು ಇರುತ್ತದೆ, ಮರಣ ಹೊಂದಿದ ಮೇಲೆ ಉಸಿರು ಇರುವುದಿಲ್ಲ, ಹೆಸರು ಇರುತ್ತದೆ, ಹುಟ್ಟು ಮತ್ತು ಸಾವುಗಳ ನಡುವೆ ನಾವು ಸಾಧನೆಗಳನ್ನು ಮಾಡಿ  ಹೆಸರನ್ನ ಸಂಪಾದಿಸಬೇಕು. ರೈತರು, ಯೋಧರಂತೆ ದೇಶದ ಬೆನ್ನೆಲುಬು ಪದವೀಧರರು. ದೇಶದ ಭವ್ಯ ಭವಿಷ್ಯದ  ನಿರ್ಮಾಣದಲ್ಲಿ ಪದವೀಧರರ ಪಾತ್ರ ಬಹಳ ಮುಖ್ಯ. ಪದವೀಧರರ ಸಮಸ್ಯೆಗಳನ್ನು ಅತಿ ಹತ್ತಿರದಿಂದ ಬಲ್ಲವನಾಗಿದ್ದು, ಪದವೀಧರ  ಸಮಸ್ಯೆಗಳಿಗೆ  ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು. ಈ ವೇಳೆ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ಎಚ್. ಮಾಲತೇಶ್  ಹಾಜರಿದ್ದರು. ಈ ವೇಳೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ಪದವೀಧರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.