ಮಂಗಳೂರು ಮೇ 19 NEWS DESK : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ರನ್ನು ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ .ಭೋಜೇಗೌಡ ಅವರು ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆ ಕುರಿತು ಸಮಾಲೋಚಿಸಿದರು. ಈ ಸಂದರ್ಭ ಬಿಜೆಪಿ ರಾಜ್ಯ ಪ್ರಕೋಸ್ಟಗಳ ಸಂಯೋಜಕ ಎಸ್ ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಎಚ್ ಮಾಲ್ತೇಶ್ ಮತ್ತಿತರರು ಉಪಸ್ಥಿತರಿದ್ದರು.