ಮಂಗಳೂರು ಮೇ 19 NEWS DESK : ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಬಂಧನ ಖಂಡನೀಯವೆಂದು ವಿಧಾನ ಪರಿಷತ್ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸಿ ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸ್ ಆಧಾರದ ಮೇಲೆ ಶಶಿರಾಜ್ ರನ್ನು ಬಂಧಿಸಿದೆ. ಆಡಳಿತ ಯಂತ್ರವನ್ನು ಉಪಯೋಗಿಸಿ, ಕೀಳುಮಟ್ಟದ ತಂತ್ರಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ಕಾರ್ಯಕರ್ತರ ಜೊತೆ ಸಂಘಟನೆ ನಿಲ್ಲಲಿದೆ, ಏನೇ ಬರಲಿ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸರ್ಜಿ ತಿಳಿಸಿದ್ದಾರೆ.











