ಮಡಿಕೇರಿ ಮೇ 19 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಬೆನ್ನಲ್ಲೇ ಜಿಲ್ಲೆಯಾದ್ಯಂತ ಮೇ 23ರವರೆಗೆ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆ ಸುರಿಯಲಿದ್ದು, ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ ಇರಲಿದೆ. ಸಾರ್ವಜನಿಕರು ಜಾಗೃತರಾಗಿರುವಂತೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.











