ಮಡಿಕೇರಿ ಮೇ 20 NEWS DESK : ಕೊಡವ ಮಕ್ಕಡ ಕೂಟದ 100ನೇ ಪುಸ್ತಕಕ್ಕೆ ಬರಗಾರರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. 100 ಬರಹಗಾರರ ಲೇಖನಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಿ 100 ನೇ ಪುಸ್ತಕವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ, ಇತಿಹಾಸ, ಸೇರಿದಂತೆ ಸಮಾಜಮುಖಿ ಬರಹಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರ ತರಲು ನಿರ್ಧರಿಸಲಾಗಿದೆ. ಬರಹ ಯಾವ ಭಾಷೆಯಲ್ಲಿ ಬೇಕಾದರು ಇರಬಹುದು.
ಆಸಕ್ತ ಬರಹಗಾರರು ಯಾವುದೇ ಜಾತಿ, ಮತ, ಬೇಧವಿಲ್ಲದೆ ತಮ್ಮ ಬರಹಗಳನ್ನು ಟೈಪ್ ಮಾಡಿ ಅಥವಾ ಬರೆದು ಕೊಡವ ಮಕ್ಕಡ ಕೂಟ, ಕೆ.ಬಾಡಗ, ಎಫ್.ಎಂ.ಕೆ.ಎ.ಸಿ ಕಾಲೇಜು ಪೋಸ್ಟ್, ಮಡಿಕೇರಿ, ಕೊಡಗು ಈ ವಿಳಾಸಕ್ಕೆ ಕಳುಹಿಸಬಹುದು ಅಥವಾ ಬೊಳ್ಳಜಿರ ಬಿ.ಅಯ್ಯಪ್ಪ 9880778047 ಮೊ.ಸಂಖ್ಯೆಗೆ ವಾಟ್ಸ್ಅಪ್ ಮಾಡಬಹುದು. ಲೇಖನಗಳನ್ನು ಜೂನ್ 30ರೊಳಗೆ ಕಳುಹಿಸಬೇಕು ಎಂದು ಬೊಳ್ಳಜಿರ ಅಯ್ಯಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.