Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕಾರ್ಪಣೆಗೆ ಸಿದ್ಧಗೊಂಡಿರುವ ಪವಿತ್ರ ಕುಟುಂಬ ದೇವಾಲಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕಾರ್ಪಣೆಗೆ ಸಿದ್ಧಗೊಂಡಿರುವ ಪವಿತ್ರ ಕುಟುಂಬ ದೇವಾಲಯ*

ಮೇ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಮೇ 20 NEWS DESK : ಸೋಮವಾರಪೇಟೆ ತಾಲೂಕಿನ ಮಾದಾಪುರ ವ್ಯಾಪ್ತಿಯಲ್ಲಿನ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯವು ಮೇ 21 ರಂದು ಲೋಕಾರ್ಪಣೆಗೊಳ್ಳಲಿದೆ.
ನೂತನ ದೇವಾಲಯದ ಉದ್ಘಾಟನೆ ಮತ್ತು ಆರ್ಶಿವಚನವನ್ನು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಪರಮಪೂಜ್ಯ ಡಾ.ಬರ್ನಾಡ್ ಮೊರಾಸ್ ನೇರವೇರಿಸಲಿದ್ದು, ಅತೀ ವಂ.ಗುರುಗಳಾದ ಮೈಸೂರು ಧರ್ಮಾಕ್ಷೇತ್ರದ ಜಾನ್ ಅಲ್ಬರ್ಡ್ ಮೆಂಡೋನ್ಸಾ, ಮಡಿಕೇರಿ ವಲಯದ ಶೇಷ್ಠಗುರುಗಳಾದ ಜಾರ್ಜ್ ದೀಪಕ್ ಉಪಸ್ಥಿತರಿಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿಗಳಾದ ದೀವಕರ್ ಎಂ.ಲಕ್ಷ್ಮೀಜಾಲ ಎಸ್ಟೇಟ್ ಮಾಲೀಕರಾದ ಕೋಗಂಡ ವಿನಯ್‍ಸೋಮಯ್ಯ ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿದ್ದಪ್ಪ ಉಪಾಧ್ಯಕ್ಷರಾದ ಸುರೇಶ್ ಸದಸ್ಯರುಗಳಾದ ಅಂತೋಣಿ ಪಿ.ಡಿ.ಜೆರ್ಮಿ, ದಮಯಂತಿ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ವಲಯಾದ ಶೃದ್ಧಾ ಕೇಂದ್ರಗಳಲ್ಲಿ ಒಂದಾಗಿರುವ ಕುಂಬೂರುವಿನ ಪವಿತ್ರ ಕುಟುಂಬ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಭವ್ಯ ದಿವ್ಯ ನವೀನ ದೇವಾಲಯಕ್ಕೆ 10 ಹಲವು ಧರ್ಮಗುರುಗಳು ಕನ್ಯಾಸ್ತ್ರೀಯರು ಮತ್ತು ಭಕ್ತರ ತ್ಯಾಗ ಪರಿಶ್ರಮ ಮತ್ತು ಭಕ್ತಿಯ ಸಮರ್ಪಣೆ ಇದೆ.
ಜೆವಿಪ್ರಭು ಧರ್ಮಗುರುಗಳಿಂದ ಪ್ರಾರಂಭಗೊಂಡ ನೂತನ ದೇವಾಲಯದ ಕಟ್ಟಡ ಕನಸ್ಸು ಪ್ರಸ್ತುತ ಧರ್ಮಗರುಗಳಾದ ರಾಜೇಶ್ ಅವರ ಕಾಲದಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಹಳ್ಳಕೊಳಗಳಿಂದ ಕಚ್ಚ ರಸ್ತೆಯಲ್ಲಿ ಸೈಕಲ್‍ನಲ್ಲಿ ಓಡಾಡಿ ಧರ್ಮಗುರ ಅಲ್ಬರ್ಟ್‍ಗೊನ್ಸಾವೆಲ್ಸ್ ಒಂದು ಪುಟ್ಟದಾದ ಹುಲುಹಸಿನ ಧರ್ಮಕುಟ್ಟಿರವನ್ನು ನಿರ್ಮಿಸಿದರು.
ಈ ದೇವಾಲಯದ ಧರ್ಮಗುರುಗಳಾಗಿ ವಂ.ರೆ.ಫಾದರ್ ರಾಜೇಶ್ ಅವರು 6 ವರ್ಷಗಳ ಹಿಂದೆ ಈ ದೇವಾಲಯದ ಧರ್ಮಗುರುಗಳಾಗಿ ಅಧಿಕಾರ ಸ್ವೀಕರಿಸಿಕೊಂಡರು. ಹಿಂದಿನ ಧರ್ಮಗುರುಗಳಾದ ರೇ.ಫಾ.ಸಂತೋಷ್ ಕಾಲಕ್ರಮೇಣ ಸಮುದಾಯದ ಕುಟುಂಬಗಳ ದ್ವಿಗುಣಗೊಳ್ಳುತ್ತಿರುವುದನ್ನು ಮನಗಂಡ ಅವರು ದೇವಾಲಯದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಅನಿವಾರ್ಯವಾಗಿದ್ದು, ಕಂಡುಕೊಂಡ ಅವರು ಹಾಗೂ ಶಿಷ್ಯ ವರ್ಗದವರೊಂದಿಗೆ ಚರ್ಚಿಸಿದಾಗ ದೇವಾಲಯದ ಅಭಿವೃದ್ಧಿ ಮತ್ತು ವಿಸ್ತರಣೆ ಕುರಿತು ಒಮ್ಮತದ ತಿರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಮಡಿಕೇರಿ ವಲಯ ಮುಖ್ಯಸ್ಥರ ಮೂಲಕ ಮೈಸೂರು ಧರ್ಮಾಕ್ಷೇತ್ರಕ್ಕೆ ವಿವರವಾದ ನೀಲಿನಕ್ಷೆಯನ್ನು ತಯಾರಿಸಿ ಕಳುಹಿಸಿಕೊಡಲಾಯಿತು. ಅಲ್ಲಿಂದ ಬಂದ ಆದೇಶದ ಪ್ರಕಾರ ದೇವಾಲಯವನ್ನು 22-08-2017 ರಲ್ಲಿ ನೂತನ ದೇವಾಲಯ ನಿರ್ಮಿಸುವ ಕಾರ್ಯಕ್ಕೆ ರೇ.ಫಾ.ಸಂತೋಷ್ ಆರಂಭಿಸಿ ತಳಪಾಯದ ಕಾರ್ಯವನ್ನು ನಿರ್ವಹಿಸಿದರು. ನಂತರದ ದಿನಗಳಲ್ಲಿ 2018 ರಲ್ಲಿ ವಂ.ರೆ.ಫಾದರ್ ರಾಜೇಶ್ ಅವರು ಆಗಮಿಸಿ ಅಭಿವೃದ್ಧಿ ಮತ್ತು ವಿಸ್ತರಣೆ ಕಾರ್ಯವನ್ನು ಮುಂದುವರೆಸಿ ಇದೀಗ ಪವಿತ್ರ ಕುಟುಂಬ ದೇವಾಲಯದ ಸದಸ್ಯರು ಮತ್ತು ಭಕ್ತರು ಶಿಷ್ಯ ವರ್ಗದವರ ಅಪಾರ ಪರಿಶ್ರಮ ದೇಣಿಗೆ ಮತ್ತು ಪ್ರಾರ್ಥನೆಗಳಿಂದ ನಾವಿಂದು ಕಾಣುತ್ತಿರುವ ನೂತನ ಕಟ್ಟಡ ಲೋಕಾರ್ಪಣೆಗೆ ಸಿದ್ಧವಾಗಿದ್ದು ಧರ್ಮಗುರುಗಳ ಆರ್ಶಿವಚನ ಮತ್ತು ನಿರಂತರ ಶೃದ್ಧಾ ಭಕ್ತಿಯ ಪೂಜೆಗೆ ಬಳಕೆಯಾಗಲಿದೆ. ದೇವಾಲಯದ ಸರಕಾರದಿಂದ ರೂ 25 ಲಕ್ಷ ಅನುದಾನ ಹಾಗೂ ದಾನಿಗಳು, ಭಕ್ತಾಧಿಗಳಿಂದ ನೆರವು ದೊರೆತ್ತಿದ್ದು ರೂ 1 ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಧರ್ಮಗುರು ರಾಜೇಶ್ ಸಂತಸವನ್ನು ಹಂಚಿಕೊಂಡರು.
ದೇವಾಲಯದಲ್ಲಿ ಅತ್ಯಂತ ಆಕರ್ಷಣಿಯವಾಗಿ ಕಸೂರಿ ಕೆಲಸಗಳಿಂದ ಕೂಡಿದ ಪೂಜ್ಯಬಲಿಪೀಠ ಪ್ರಭುಕ್ರಿಸ್ತರ ಪ್ರರಮಪ್ರಸಾದ ಪೆಟ್ಟಿಗೆ ಸೇರಿದಂತೆ ಪ್ರಭುಕ್ರಿಸ್ತರ ಮಾನವರ ರಕ್ಷಣೆಗಾಗಿ ಶಿಲುಬೆಯ ಮೇಲೆ ಮರಣಹೊಂದಿರುವ ಪ್ರತಿಮೆ ಪ್ರಭುಕ್ರಿಸ್ತರ ಸಾಕು ತಂದೆ ಜೋಸೆಫ್ ಹಾಗೂ ತಾಯಿ ಮರಿಯಮ್ಮನವರ ಪವಿತ್ರ ಕುಟುಂಬದ ಪ್ರತಿಮೆಗಳು ಹಾಗೂ ವಿವಿಧ ಸಂತರುಗಳಾದ ಸೆಬಾಸ್ಟೀನ್, ಅಂತೋಣಿ ಮತ್ತಿತರರ ಪ್ರತಿಮೆಗಳನ್ನು ಅಳವಡಿಸಲಾಗಿದೆ. ಹೊರಾಂಗಣವನ್ನು ಸುಮಾರು 70 ಅಡಿ ಎತ್ತರದ ಗೋಪುರವನ್ನು ನಿರ್ಮಿಸಲಾಗಿದ್ದು ಪ್ರಭುಕ್ರಿಸ್ತರ ಪ್ರತಿಮೆಯನ್ನು ಮೇಲ್ಬಾಗದಲ್ಲಿ ಅಳವಡಿಸಿದ್ದು, ದೇವಾಲಯವು ಅತ್ಯಂತ ಆಕರ್ಷವಾಗಿ ಭಕ್ತರನ್ನು ತನ್ನಡೆಗೆ ಆಕರ್ಷಿಸುತ್ತಿದೆ.
ಅಂದಿನಿಂದ ನಿರಂತರವಾಗಿ ದೇವಾಲಯದ ಪುನರ್ ನಿರ್ಮಾಣ ಮತ್ತು ವಿಸ್ತರಣಾ ಕಾರ್ಯ ಹಗಲು ರಾತ್ರಿ ಎನ್ನದೆ ವಂದನೀಯ ಧರ್ಮಗುರುಗಳು ಸೆರಿದಂತೆ ಜಾನಿಸಿಕ್ವೇರಾ, ಪ್ರವೀಣ್ ಡಿಸೋಜ, ನವೀನ್ ಡಿಸೋಜ, ಜಾನ್ ಪೀಂಠೋ ಸೇರಿದಂತೆ ಹಲವರು ಮಂದಿ ಶ್ರಮವಹಿಸಿ ಕಾರ್ಯವನ್ನು ನಿರ್ವಹಿಸಿದ್ದಾರೆಂದು ಧರ್ಮಗುರುಗಳಾದ ರಾಜೇಶ್ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.