ಮಡಿಕೇರಿ ಮೇ 20 NEWS DESK : ಕೊಡಗು ಜಿಲ್ಲೆಯ ಬಹುತೇಕ ಕಡೆ ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಎರಡು ಇಂಚಿಗೂ ಅಧಿಕ ಮಳೆಯಾಗಿದ್ದು, ಕುಶಾಲನಗರ ಭಾಗದಲ್ಲಿ ಅಂಗಡಿ ಮತ್ತು ಮನೆಗಳಿಗೆ ನೀರು ನುಗ್ಗಿದೆ.
ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಕದನೂರು, ಕಕ್ಕಬ್ಬೆ, ನಾಪೋಕ್ಲು, ಮೂರ್ನಾಡು, ನಂಜರಾಯಪಟ್ಟಣ, ಗುಡ್ಡೆಹೊಸೂರು, ಸುಂಟಿಕೊಪ್ಪ, ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ನಿರಂತರ ಎರಡು ಮೂರು ಗಂಟೆಗಳ ಕಾಲ ಮಳೆ ಸುರಿದ ಪರಿಣಾಮ ಮಡಿಕೇರಿ ನಗರದ ರಸ್ತೆಗಳು ಜಲಾವೃತಗೊಂಡವು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಮನೆ ಮತ್ತು ಅಂಗಡಿಗಳಿಗೆ ನುಗ್ಗುವ ಆತಂಕ ಸೃಷ್ಟಿಸಿತು. ಮಳೆಯಷ್ಟೇ ಆಗುತ್ತಿದ್ದು, ಗಾಳಿ ಇಲ್ಲದ ಕಾರಣ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಬೆಟ್ಟಗುಡ್ಡಗಳಿಂದ ಕೂಡಿರುವ ಮಡಿಕೇರಿಯಲ್ಲಿ ಭಾರೀ ಗಾಳಿ ಬೀಸಿದರೆ ಅನಾಹುತಗಳು ಎದುರಾಗುವುದೇ ಹೆಚ್ಚು.
ಸುಂಟಿಕೊಪ್ಪ, ಕುಶಾಲನಗರ, ಬೈಲುಕುಪ್ಪೆ ಭಾಗದಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಂಗಡಿಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ. ಕುಶಾಲನಗರ ಪುರಸಭೆ ವ್ಯಾಪ್ತಿಯ ಗುಮ್ಮನಕೊಲ್ಲಿ, ವೀರಭೂಮಿ, ಮಂಟಿ ಹಾಗೂ ಅಕ್ಕಪಕ್ಕದ ಬಡಾವಣೆಗಳ ಭಾಗದ ಮಳೆ ನೀರು ಗುಮ್ಮನಕೊಲ್ಲಿ ವಾರ್ಡ್ ನಂಬರ್ ನಾಲ್ಕು ಮತ್ತು ಐದರ ತಗ್ಗುಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಕಾಫಿ ಕ್ಯೂರಿಂಗ್ ಸೆಂಟರ್ ಮತ್ತು ಮರದ ಮಿಲ್ ಗಳಿಗೂ ನೀರು ಹರಿದಿದೆ. ರಸ್ತೆಗಳಲ್ಲಿ ಪ್ರವಾಹದಂತೆ ಬಂದ ನೀರು ಜನರಲ್ಲಿ ಆತಂಕ ಮೂಡಿಸಿತು. ಚರಂಡಿಗಳ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
ನದಿ, ತೊರೆಗಳಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಮಳೆ ಹೀಗೇ ಮುಂದುವರೆದರೆ ಜಿಲ್ಲೆಯ ಇತರ ಭಾಗಗಳಲ್ಲೂ ನೀರಿನ ಹರಿವು ಹೆಚ್ಚಾಗಿ ಅನಾಹುತಗಳು ಎದುರಾಗಬಹುದು ಎಂದು ಜನ ಭೀತಿ ವ್ಯಕ್ತಪಡಿಸಿದ್ದಾರೆ.
ಯಾವುದೇ ಸನ್ನಿವೇಶವನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
::: ಮಳೆ ವಿವರ :::
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 17.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 198.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 122.89 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.25 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 296.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 179.33 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 122.85 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 74.11 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 176.89 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 76.94 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 172.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 96.66 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 222 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 187.40 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 5.20, ನಾಪೋಕ್ಲು 9.20, ಸಂಪಾಜೆ 71, ಭಾಗಮಂಡಲ 55.60, ವಿರಾಜಪೇಟೆ ಕಸಬಾ 6.80, ಅಮ್ಮತ್ತಿ 10, ಹುದಿಕೇರಿ 1.30, ಶ್ರೀಮಂಗಲ 0.20, ಪೊನ್ನಂಪೇಟೆ 2, ಬಾಳೆಲೆ 90.10, ಸೋಮವಾರಪೇಟೆ ಕಸಬಾ 6.60, ಶನಿವಾರಸಂತೆ 11.20, ಶಾಂತಳ್ಳಿ 17.40, ಕೊಡ್ಲಿಪೇಟೆ 14, ಕುಶಾಲನಗರ 8.40, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2823.09 ಅಡಿಗಳು. ಕಳೆದ ವರ್ಷ ಇದೇ ದಿನ 2819.78 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 31.40 ಮಿ.ಮೀ., ಇಂದಿನ ನೀರಿನ ಒಳಹರಿವು 287 ಕ್ಯುಸೆಕ್, ಕಳೆದ ವರ್ಷ ಇದೇ ದಿನ 89 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.