ಮಡಿಕೇರಿ ಮೇ 23 NEWS DESK : ಕಳೆದ ಎರಡು ದಿನಗಳ ಹಿಂದೆ ಕುಶಾಲನಗರ ಪಟ್ಟಣ ಮತ್ತು ಹೊರವಯಗಳಲ್ಲಿ ಸುರಿದ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.
ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ, ಹೊರವಲಯದ ಗುಮ್ಮನಕೊಲ್ಲಿ, ಹಾರಂಗಿ ರಸ್ತೆ ವ್ಯಾಪ್ತಿಯ ಬಡಾವಣೆಗಳಿಗೆ ಮತ್ತು ಕುಡ್ಲೂರು ವ್ಯಾಪ್ತಿಯಲ್ಲಿ ತಡೆಗೋಡೆ ಕುಸಿತದಿಂದ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲಿಸಿದರು.
ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ತಡೆಗೋಡೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಆದಷ್ಟು ಬೇಗನೇ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾಯಿ ಬಡಾವಣೆಯಲ್ಲಿ ಶಾಸ್ವತವಾಗಿ ಪ್ರವಾಹ ತಪ್ಪಿಸಲು ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು.
ರಾಜಕಲುವೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದೆಂದರು.
ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಮಾಜಿ ಸದಸ್ಯ ವಿ.ಪಿ.ಶಶಿಧರ್, ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಹರೀಶ್ ಮತ್ತು ಬಡಾವಣೆಗಳ ನಿವಾಸಿಗಳು ಇದ್ದರು.