Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚುನಾವಣೆ ಮುಗಿದಿದೆ, ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಿ : ಮಳೆ ಸಂಬಂಧಿತ ಕಾರ್ಯಗಳನ್ನು ತುರ್ತಾಗಿ ಮಾಡಿ : ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ*
ಇತ್ತೀಚಿನ ಸುದ್ದಿಗಳು

*ಚುನಾವಣೆ ಮುಗಿದಿದೆ, ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಿ : ಮಳೆ ಸಂಬಂಧಿತ ಕಾರ್ಯಗಳನ್ನು ತುರ್ತಾಗಿ ಮಾಡಿ : ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ*

May 23, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು ಮೇ 23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ.ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ ಎಂದು ಹೇಳಿದರು. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ.

ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಜೂನ್‌ 6 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ವಿಮಾ ಕಂಪನಿಗಳ ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ. ಆದ್ದರಿಂದ ಈ ಕುರಿತು ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಎಸ್‍ಜೆಎಂ ವಾರ್ಷಿಕ ಮಹಾಸಭೆ : ಪ್ರತಿಭೆಗಳಿಗೆ ಸನ್ಮಾನ*
Next Article *ಅಂತರ್ ಕಾಲೇಜು ಹಾಕಿ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಚಾಂಪಿಯನ್*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.