ಸೋಮವಾರಪೇಟೆ ಮೇ 24 NEWS DESK : ಡಿಜಿ ವಿಕಸನ ಕಾರ್ಯಕ್ರಮದಡಿ ಸೋಮವಾರಪೇಟೆ ತಾಲ್ಲೂಕಿನ ಗ್ರಂಥಾಲಯ ಪ್ರಗತಿ ಪರಿಶೀಲನಾಸಭೆ ಮತ್ತು ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉದ್ಘಾಟಿಸಿದರು.
ಗ್ರಾ.ಪಂ ಗ್ರಂಥಾಲಯವು ಜ್ಞಾನ ಮೂಡಿಸುವ ಕೇಂದ್ರಗಳಾಗಿವೆ. ಪ್ರತಿಯೊಂದು ಮಾಹಿತಿಯೂ ಇಲ್ಲಿ ಸಿಗುವಂತಾಗಬೇಕು. ಡಿಜಿಟಲ್ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಶಿಕ್ಷಣ ಫೌಂಡೇಶನ್ ಸಹಯೋಗದ ಗ್ರಾಮ ಡಿಜಿ ವಿಕಸನದಡಿ ನೀಡಿರುವಂತಹ ಮಾನಿಟರ್, ಟಿ.ವಿ, ಮೊಬೈಲ್‍ಗಳಲ್ಲಿ ಪಠ್ಯ ಪುಸ್ತಕಕ್ಕೆ ಸಂಬಂಧಿಸಿದ ವಿಷಯಗಳು, ಡಿಜಿಟಲ್ ಸಂಬಂಧಿಸಿದ ವಿಷಯಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಕಲಿಕೆಗೆ ಸ್ಥಳೀಯ ಗ್ರಾ.ಪಂ ಗಳ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.
ಕಳೆದ ಎರಡು ವರ್ಷದಲ್ಲಿ ಗ್ರಂಥಾಲಯ ನಿರ್ವಹಣೆ, ಅತ್ಯುತ್ತಮ ಅನುಷ್ಠಾನಕ್ಕೆ ಸಂಬಂಧಪಟ್ಟ ಪ್ರಶಸ್ತಿಯನ್ನು ದುಂಡಳ್ಳಿ, 7ನೇ ಹೊಸಕೋಟೆ, ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಪಡೆಯಿತು.
ಗ್ರಂಥಾಲಯ ಮೇಲ್ವಿಚಾರಕರಾದ ಎಸ್.ಪಿ.ದಿವ್ಯ, ಸರಿತಾ, ವಾಸಂತಿ ಪ್ರಶಸ್ತಿ ಸ್ವೀಕರಿಸಿದರು. ಇದೇ ಸಂದರ್ಭ ಲ್ಯಾಪ್ ಟ್ಯಾಪ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ವಿಕಸನ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ರಕ್ಷಿತ್, ದಿಲೀಪ್ ಇದ್ದರು.