ಮಡಿಕೇರಿ ಮೇ 24 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವ ದಿ. ಶ್ರೀ ಡಾ ವಿ.ಎಸ್.ಆಚಾರ್ಯ ಅವರ ಉಡುಪಿಯ ಮಣಿಪಾಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಡಾ. ಶಾಂತಾ ಆಚಾರ್ಯ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಕುಶಲೋಪಚರಿ ವಿಚಾರಿಸಿದರು.
ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.