ಉಡುಪಿ ಮೇ 24 NEWS DESK : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್.ಬೋಜೆಗೌಡ ಅವರು ಉಡುಪಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಡಾ ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕ್ಕೆ ಭೇಟಿ ನೀಡಿ ಅಲ್ಲಿನ ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮತಯಾಚನೆ ಮಾಡಲಾಯಿತು. ಈ ವೇಳೆ, ಕಾಲೇಜು ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ , ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.










