ಮಡಿಕೇರಿ ಮೇ 25 NEWS DESK : ಕಂಡಕರೆಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿಯ ವತಿಯಿಂದ ನೀಡಲಾಗುತ್ತಿರುವ “ಮಾದರಿ ಜನಪ್ರತಿನಿಧಿ” ಪ್ರಶಸ್ತಿಗೆ ಸಮಾಜ ಸೇವಕ, ಕೆ.ನಿಡುಗಣೆ ಗ್ರಾ.ಪಂ ಸದಸ್ಯ “ಜಾನ್ಸನ್ ಪಿಂಟೋ” ಭಾಜನರಾಗಿದ್ದಾರೆ.
ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಜೂ.9 ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.