ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಸೇಂಟ್ ಮೇರೀಸ್ ಸೈರನ್ ಪಿಯು ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭೇಟಿ ನೀಡಿ ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮತಯಾಚಿಸಿದರು.
ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್ ಉಡುಪ, ಡಾ.ವಿದ್ಯಾಲತಾ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.