ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಪರವಾಗಿ ಶಿವಮೊಗ್ಗ ನಗರದ ವಿವಿಧ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ, ಉಪನ್ಯಾಸವರ್ಗ ಮತ್ತು ಸಿಬ್ಬಂದಿ ವರ್ಗದವರಲ್ಲಿ ತಮ್ಮನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು.
ಈ ಸಂದರ್ಭ ನಾಗವೇಣಿ ಸರ್ಜಿ, ಡಾ.ರಜತ್, ಡಾ.ಪ್ರಾಣೇಶ್, ಡಾ.ರಾಘವಾಂಕ, ಮೋಹನ್ ಸೇರಿದಂತೆ ಹಲವರು ಹಾಜರಿದ್ದರು.