Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಪತ್ರಕರ್ತರ ಸಂವಾದ : ಮೊಬೈಲ್ ನಲ್ಲಿ ಮುಳುಗಿರುವ ಯುವ ಪೀಳಿಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಪತ್ರಕರ್ತರ ಸಂವಾದ : ಮೊಬೈಲ್ ನಲ್ಲಿ ಮುಳುಗಿರುವ ಯುವ ಪೀಳಿಗೆ*

ಮೇ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 25 NEWS DESK : ಪತ್ರಿಕೆಗಳು ಓದುಗರನ್ನು ಹಿಡಿದಿಟ್ಟುಕೊಳ್ಳುವಂತಹ ವರದಿಗಳನ್ನು ನಿರಂತರವಾಗಿ ಪ್ರಕಟಿಸಬೇಕು ಎಂದು ಕುಶಾಲನಗರ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಆಡಳಿತ ಅಧಿಕಾರಿ ಮಹೇಶ್ ಅಮೀನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ವಿವೇಕಾನಂದ ಕಾಲೇಜು ಸಭಾಂಗಣದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಾಲೇಜು ಆಡಳಿತ ಮಂಡಳಿ ಸಹಯೋಗದೊಂದಿಗೆ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ನಡೆದ ಪರಿಸರ ಮತ್ತು ಮಾಧ್ಯಮ ವಿಷಯಗಳ ಬಗ್ಗೆ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ನಲ್ಲಿ ಮುಳುಗಿರುವ ಯುವ ಪೀಳಿಗೆ ಓದುವ ಹವ್ಯಾಸವನ್ನು ಮರೆತಂತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ ಎಂದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್, ವಿದ್ಯಾರ್ಥಿಗಳು ದಿನನಿತ್ಯದ ಆಗುಹೋಗುಗಳ ಬಗ್ಗೆ ಅರಿವು ಪಡೆಯಬೇಕು. ಪತ್ರಿಕೆಯನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಈ ಮೂಲಕ ಸಾಮಾನ್ಯ ಜ್ಞಾನ ಗಳಿಸಲು ಸಾಧ್ಯ ಎಂದರಲ್ಲದೆ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ಹೊಂದಬೇಕು ಎಂದರು.  ಕಾಲೇಜಿನ ಪಿ ಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮಾನ್ಯ ಪರಿಸರ ಸಂರಕ್ಷಣೆಯ ಬಗ್ಗೆ ಮತ್ತು ಎಂಜಿಎಂ ಪದವಿ ಕಾಲೇಜಿನ  ವಿದ್ಯಾರ್ಥಿನಿ ಖುಷಿ ಅವರು ಮಾಧ್ಯಮ ಹಾಗೂ ಸಮಾಜ ಎಂಬ ವಿಷಯ ಮಂಡಿಸಿದರು. ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ನಿರ್ದೇಶಕರಾದ ಟಿ ಆರ್ ಪ್ರಭುದೇವ್ ಅವರು ಮಾತನಾಡಿದರು. ಕಳೆದ ಸಾಲಿನ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಬಿ ಎಸ್ ತನುಷ ಪೋಷಕರನ್ನು ಮತ್ತು ವಾಣಿಜ್ಯ ವಿಭಾಗದಲ್ಲಿ ಹೆಚ್ಚಿನ ಅಂಕ ಗಳಿಸಿದ ಎಂ ವೈ ನಿಹಾರಿಕ ಅವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪರಿಸರ ಮತ್ತು ಮಾಧ್ಯಮ ಬಗ್ಗೆ ಸಂವಾದ ನಡೆಸಲಾಯಿತು. ಖಜಾಂಚಿ ಕುಡೆಕಲ್ ಗಣೇಶ್, ಜಿಲ್ಲಾ ನಿರ್ದೇಶಕರಾದ ಸಂಸುದ್ದೀನ್, ಸಂಘದ ನಿರ್ದೇಶಕರುಗಳಾದ ವಿನೋದ್ ಮಹಮ್ಮದ್ ಮುಸ್ತಾಫಾ, ಜಯಪ್ರಕಾಶ್ ಇದ್ದರು. ಕಾಲೇಜು ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ಕಾರ್ಯಕ್ರಮ ಸಂಚಾಲಕರಾದ ಕೆ ಕೆ ನಾಗರಾಜ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಸ್ವಾಗತ, ಸಂಘದ ನಿರ್ದೇಶಕರಾದ ಕೆ ಜೆ ಶಿವರಾಜ್  ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.23 – ಚೆಟ್ಟಳ್ಳಿ ಪ್ರೌಢಶಾಲೆಯ ಮಂಗಳಾ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಹಿರಿಯ ನಾಗರಿಕರಿಗೆ…

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.