Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ : ಪಕ್ಷೇತರ ಅಭ್ಯರ್ಥಿ ಬಿ.ಮಹಮ್ಮದ್ ತುಂಬೆ ಭರವಸೆ*
ಇತ್ತೀಚಿನ ಸುದ್ದಿಗಳು

*ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ : ಪಕ್ಷೇತರ ಅಭ್ಯರ್ಥಿ ಬಿ.ಮಹಮ್ಮದ್ ತುಂಬೆ ಭರವಸೆ*

May 26, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 26 NEWS DESK : ನಿರುದ್ಯೋಗದಿಂದಾಗಿ ಸಮಾಜದಲ್ಲಿ ಅನೇಕ ಸಮಸ್ಯೆಗಳು ಕಾಡುತ್ತಿದ್ದು, ತಾವು ಗೆದ್ದು ಬಂದರೆ ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಿ.ಮಹಮ್ಮದ್ ತುಂಬೆ ಭರವಸೆ ನೀಡಿದ್ದಾರೆ.  ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗು ಜಿಲ್ಲೆಯ ಪ್ರಜ್ಞಾವಂತ ಮತದಾರರು ನನಗೆ ಹೆಚ್ಚಿನ ಮತಗಳನ್ನು ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಇಂದು ಅಸಂಖ್ಯಾತ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅತಂತ್ರತೆಯ ಬದುಕನ್ನು ಸಾಗಿಸುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಅನೇಕ ಸಮಸ್ಯೆಗಳು ತಲೆದೋರುತ್ತಿವೆ. ಸರಕಾರಗಳು ಈ ಕುರಿತು ಯಾವುದೇ ಯೋಜನೆಗಳನ್ನು ರೂಪಿಸುವಂತೆ ಕಂಡು ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಾನು ಗೆದ್ದು ಬಂದರೆ ನಿರುದ್ಯೋಗಿ ಪದವೀಧರರ ಬೇಡಿಕೆಗಳ ಪರ ಧ್ವನಿಯಾಗುತ್ತೇನೆ. ನಿರುದ್ಯೋಗಿ ಪದವೀಧರರಿಗೆ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳನ್ನು ಆರಂಭಿಸುವಂತೆ ಸರಕಾರದ ಗಮನ ಸೆಳೆಯುತ್ತೇನೆ. ಕರ್ನಾಟಕದಲ್ಲಿರುವ ವಿವಿಧ ವಿಶ್ವವಿದ್ಯಾನಿಲಯಗಳ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕಪಟ್ಟಿ ಸಕಾಲದಲ್ಲಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕೋವಿಡ್ ಕಾರಣದಿಂದ ಸರಕಾರಿ ಹುದ್ದೆಗಳ ನೇಮಕಾತಿ ಹೊಂದದೆ ಬಾಕಿ ಉಳಿದಿರುವ ಉದ್ಯೋಗಾಕಾಂಕ್ಷಿಗಳ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಬಗ್ಗೆ ಪ್ರಯತ್ನಿಸುತ್ತೇನೆ. ಎನ್‌ಇಪಿ ಮತ್ತು ಎಸ್‌ಇಪಿ ನಡುವಿನ ಗೊಂದಲವನ್ನು ಸರಿಪಡಿಸುವ ಬಗ್ಗೆ ಸರಕಾರದ ಗಮನ ಸೆಳೆಯುತ್ತೇನೆ. ತತ್ಸಮಾನ ಪದವಿಗಳ(ಹಿಂದಿ, ಸಂಸ್ಕೃತ) ಬಗ್ಗೆ ಇರುವ ಗೊಂದಲಗಳ ನಿವಾರಣೆಗೆ ಪ್ರಯತ್ನ ಮತ್ತು ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸರಕಾರದೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಶ್ರಮಿಸುತ್ತೇನೆ ಎಂದು ಬಿ.ಮಹಮ್ಮದ್ ತುಂಬೆ ಭರವಸೆ ನೀಡಿದರು. ನಾನು ಶಿಕ್ಷಕನಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯ ಬೆಳಕನ್ನು ನೀಡಿದ್ದೇನೆ. ಯೋಗ್ಯ ವಿದ್ಯಾರ್ಥಿಗಳನ್ನು ಸುಸಂಸ್ಕೃತ ಮಾನವರನ್ನಾಗಿ, ದೇಶದ ಸಂಪನ್ಮೂಲವಾಗಿ, ಪ್ರಜ್ಞಾವಂತ ಪ್ರಜೆಗಳನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ. ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸೇವೆ ಸಲ್ಲಿಸಬೇಕು ಎನ್ನುವ ಉದ್ದೇಶದಿಂದ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ.

ಮಾನವ ಕುಲ ಒಂದೇ ಎಂದು ನಂಬಿರುವ ನಾನು, ಜಾತಿ ಮತ, ಧರ್ಮ, ಪಕ್ಷವನ್ನು ಮೀರಿ, ಮಾನವೀಯತೆ, ಸಮಾನತೆ, ಸಹೋದರತೆ, ಜ್ಯಾತ್ಯತೀತತೆಯ ಮನೋಭಾವ ಹೊಂದಿರುವ ಮನುಜ ಜಾತಿ ತಾನೊಂದೇ ವಲಂ ಎಂದು ನಂಬಿ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ. ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ಪೂರ್ವಾಧ್ಯಕ್ಷನಾಗಿರುವ ನಾನು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲೆಯ ಸ್ಕೌಟ್ ಆಯುಕ್ತನಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದೇನೆ. ರಾಷ್ಟ್ರ ಮಟ್ಟ ಮಾತ್ರವಲ್ಲದೆ ನೇಪಾಳ, ಶ್ರೀಲಂಕಾ, ಬಾಂಗ್ಲಾದೇಶ, ಅಮೇರಿಕ, ದಕ್ಷಿಣ ಕೊರಿಯಾ ಸ್ಕೌಟ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಭಾರತ ದೇಶವನ್ನು ಪ್ರತಿನಿಧಿಸಿದ್ದೇನೆ. ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ, ಸಾಹಿತ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆಯನ್ನು ನೀಡಿದ್ದೇನೆ. ತರಬೇತುದಾರನಾಗಿ, ಕಾರ್ಯಕ್ರಮ ಸಂಘಟಕನಾಗಿ ಹತ್ತು-ಹಲವು ಕಡೆ  ಗುರುತಿಸಿಕೊಂಡಿದ್ದೇನೆ. ಕೊಡಗು ಜಿಲ್ಲೆಯಲ್ಲಿ ವಿದ್ಯಾವಂತ, ಬುದ್ಧಿವಂತ ಮತದಾರರಿದ್ದಾರೆ. ಎಲ್ಲರೂ ಯೋಚಿಸಿ ಮತದಾನ ಮಾಡಲಿದ್ದಾರೆ ಎನ್ನುವ ನಂಬಿಕೆ ನನಗಿದೆ. ಶಿಕ್ಷಣ ಕ್ಷೇತ್ರದ ಬಗ್ಗೆ ನೈಜ ಕಾಳಜಿ ಹೊಂದಿರುವ ನನಗೆ ಅತ್ಯಧಿಕ ಮತಗಳನ್ನು ನೀಡಿ ಸಹಕರಿಸಲಿದ್ದಾರೆ ಎಂದು ಬಿ.ಮಹಮ್ಮದ್ ತುಂಬೆ ತಿಳಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಜಿಪಿಎಲ್ ಕ್ರೀಡಾಕೂಟ ಮುಂದೂಡಿಕೆ*
Next Article *ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಮತದಾನದ ಹಕ್ಕು*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.