ಕಡೂರು ಮೇ 26 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುರುಚಿ ಹೋಟೆಲ್ ಸಭಾಂಗಣದಲ್ಲಿ ಮತದಾರರ ಮತ್ತು ಪಕ್ಷದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು. ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಮತದಾರರನ್ನು ಭೇಟಿ ಮಾಡಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಮನವಿ ಮಾಡಿ ಎಂದು ಸೂಚನೆ ನೀಡಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ರೈತ ಮೋರ್ಚಾದ ಮಾದಪ್ಪ, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.