Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದ ವತಿಯಿಂದ ಅಪ್ಪಣ್ಣ, ರಾಣು ಅಪ್ಪಣ್ಣ ರಚಿತ “ಅಲಾಸ್ಕ” ಪುಸ್ತಕ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದ ವತಿಯಿಂದ ಅಪ್ಪಣ್ಣ, ರಾಣು ಅಪ್ಪಣ್ಣ ರಚಿತ “ಅಲಾಸ್ಕ” ಪುಸ್ತಕ ಬಿಡುಗಡೆ*

ಮೇ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 28 NEWS DESK : ಕೊಡವ ಮಕ್ಕಡ ಕೂಟದ ವತಿಯಿಂದ ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಅಪ್ಪಣ್ಣ ಹಾಗೂ ರಾಣು ಅಪ್ಪಣ್ಣ ಅವರು ಬರೆದ “ಅಲಾಸ್ಕ” ಪ್ರವಾಸ ಕಥನ ಕನ್ನಡ ಪುಸ್ತಕವನ್ನು ಮಡಿಕೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಐ.ಎ.ಪಿ. ಪ್ರೈವೆಟ್ ಲಿಮಿಟೆಡ್‍ನ ಸಿ.ಇ.ಒ ಮುಕ್ಕಾಟಿರ ಸೋಮಣ್ಣ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಕೊಡವ ಮಕ್ಕಡ ಕೂಟದಿಂದ ಬರಹಗಾರರನ್ನು ಪ್ರೋತ್ಸಾಹಿಸವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳು ಹೊರ ಬರಲಿ ಎಂದು ಶುಭ ಹಾರೈಸಿದರು.
ಹಿರಿಯ ಸಾಹಿತಿ ಹಾಗೂ “ಅಲಾಸ್ಕ” ಪುಸ್ತಕದ ಬರಹಗಾರ ಬಾಚರಣಿಯಂಡ ಪಿ.ಅಪ್ಪಣ್ಣ ಅವರು ಮಾತನಾಡಿ, ಹೃದಯವಂತ ಸಾಹಿತ್ಯ ಪೋಷಕರು ಇದ್ದಾಗ ಮಾತ್ರ ಸಾಹಿತ್ಯ ಕ್ಷೇತ್ರ ಅಗಾಧ ರೂಪದಲ್ಲಿ ಬೆಳೆಯಲು ಸಾಧ್ಯ ಎಂದರು.
2015ರಲ್ಲಿ ಯು.ಎಸ್.ಎ ಯ ಪ್ರತ್ಯೇಕವಾದ ಭೂ ಸ್ವರೂಪ ಮತ್ತು ವಿಶಿಷ್ಟ ಸಂಸ್ಕøತಿಯ ಮೂಲ ನಿವಾಸಿಗಳನ್ನು ಹೊಂದಿರುವ ಅಲಾಸ್ಕ ಪ್ರದೇಶವನ್ನು ಅಧ್ಯಯನ ಮಾಡಿ ದಿನಚರಿಯನ್ನಾಗಿಸಲಾಯಿತು. ಇದನ್ನು ಆಧರಿಸಿ ಪುಸ್ತಕ ಬರೆಯುತ್ತಿದ್ದ ವೇಳೆ ನಮ್ಮನ್ನು ಅಲಾಸ್ಕಕ್ಕೆ ಕರೆದೊಯ್ದ ಅಳಿಯ ಜಮ್ಮಡ ಸೋಮಯ್ಯ ಅವರು ಅಗಲಿದರು. ಈ ನೋವಿನಿಂದ ನಮ್ಮ ಪ್ರವಾಸ ಕಥನ ನಿಂತು ಹೋಗಿತ್ತು. ಇದೀಗ 9 ವರ್ಷಗಳ ನಂತರ ಬರೆದ ಸಂಗ್ರಹವನ್ನು ಪುಸ್ತಕ ರೂಪದಲ್ಲಿ ಹೊರತರಲಾಗಿದೆ ಎಂದು ಅಲಾಸ್ಕದ ಅನುಭವವನ್ನು ವಿವರಿಸಿದರು.
ಹಿರಿಯ ಸಾಹಿತಿ ಹಾಗೂ ಅಲಾಸ್ಕ ಪುಸ್ತಕದ ಮತ್ತೊಬ್ಬ ಬರಹಗಾರರಾದ ಬಾಚರಣಿಯಂಡ ರಾಣು ಅಪ್ಪಣ್ಣ ಮಾತನಾಡಿ, ಕೃತಿ ರಚನೆ ದೊಡ್ಡ ವಿಚಾರವಲ್ಲ. ಅದನ್ನು ಬರೆದು ಪುಸ್ತಕ ರೂಪದಲ್ಲಿ ಹೊರತರುವುದು ಅತ್ಯಂತ ಕಷ್ಟದ ಕೆಲಸ. ದಾನಿಗಳ ಸಹಕಾರದ ಮೂಲಕ ಓದುಗರಿಗೆ ತಲುಪಿಸುವ ಕಾರ್ಯವನ್ನು ಕೊಡವ ಮಕ್ಕಡ ಕೂಟ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕೊಡವ ಮಕ್ಕಡ ಕೂಟದ ಪ್ರಧಾನ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ಅವರ ಸಂಪಾದಕೀಯದಲ್ಲಿ ಕೊಡವ ಮಕ್ಕಡ ಕೂಟದ 100ನೇ ಪುಸ್ತಕಕ್ಕೆ ಬರಗಾರರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದರು.
100 ಬರಹಗಾರರ ಲೇಖನಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಿ 100ನೇ ಪುಸ್ತಕವಾಗಿ ಬಿಡುಗಡೆಗೊಳಿಸಲು ತೀರ್ಮಾನಿಸಲಾಗಿದೆ. ಕೊಡಗಿನ ಆಚಾರ, ವಿಚಾರ, ಸಂಸ್ಕøತಿ, ಪದ್ಧತಿ, ಪರಂಪರೆ, ಇತಿಹಾಸ, ಸೇರಿದಂತೆ ಸಮಾಜಮುಖಿ ಬರಹಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರ ತರಲು ನಿರ್ಧರಿಸಲಾಗಿದೆ. ಈ ಪ್ರಯತ್ನಕ್ಕೆ ಹಿರಿಯ, ಕಿರಿಯ ಎಲ್ಲಾ ಬರಹಗಾರರು ಸಹಕರಿಸುವಂತೆ ಮನವಿ ಮಾಡಿದರು.
ಆಸಕ್ತ ಬರಹಗಾರರು ಯಾವುದೇ ಜಾತಿ, ಮತ, ಬೇಧವಿಲ್ಲದೆ ತಮ್ಮ ಬರಹಗಳನ್ನು ಟೈಪ್ ಮಾಡಿ ಅಥವಾ ಬರೆದು ಪುತ್ತರಿರ ಕರುಣ್ ಕಾಳಯ್ಯ ಮೊ. 8762515659 ಸಂಖ್ಯೆಗೆ ವಾಟ್ಸ್‍ಅಪ್ ಮಾಡಬಹುದು. ಲೇಖನಗಳನ್ನು ಜೂನ್ 30ರೊಳಗೆ ಕಳುಹಿಸಬೇಕು ಎಂದರು.
ವೇದಿಕೆಯಲ್ಲಿ ಕಾಫಿ ಬೆಳೆಗಾರ ಮುಕ್ಕಾಟಿರ ಕಾವೇರಿಯಪ್ಪ ಹಾಗೂ ಅರಣ್ಯ ಇಲಾಖೆಯ ನಿವೃತ್ತ ನೌಕರರಾದ ಮುಕ್ಕಾಟಿರ ಸರೋಜ ಕಾವೇರಿಯಪ್ಪ ಉಪಸ್ಥಿತರಿದ್ದರು.

:: ಸಾಹಿತಿಗಳ ಪರಿಚಯ ::
:: ಬಾಚರಣಿಯಂಡ ಪಿ.ಅಪ್ಪಣ್ಣ ಹಾಗೂ ಶ್ರೀಮತಿ ರಾಣು ಅಪ್ಪಣ್ಣ ::
‘ಪ್ರವಾಸ ಕಥನ ಅಲಾಸ್ಕ’ ಬರಹಗಾರರಾದ ಬಾಚರಣಿಯಂಡ ಪಿ.ಅಪ್ಪಣ್ಣ 12.04.1935ರಲ್ಲಿ ಬೇಂಗ್‍ನಾಡ್‍ನ ಕೊಳಗದಾಳು ಗ್ರಾಮದಲ್ಲಿ ಹುಟ್ಟಿದರು. ಇತಿಹಾಸ ಉಪನ್ಯಾಸಕರಾಗಿ 40 ವರ್ಷ ಸರಕಾರಿ ಕೆಲಸ ಮಾಡಿ 1993ರಲ್ಲಿ ನಿವೃತ್ತಿ ಹೊಂದಿದ ಇವರು ಈಗ ಕುಶಾಲನಗರದಲ್ಲಿ ಇದ್ದಾರೆ.
ಶ್ರೀಮತಿ ರಾಣು ಅಪ್ಪಣ್ಣ ಕುತ್ತುನಾಡ್, ಬಿ.ಶೆಟ್ಟಿಗೇರಿ ಗ್ರಾಮದ ಕಾಳೇಂಗಡ ಮಾಚಯ್ಯನವರ ಮಗಳು. ಕನ್ನಡ ಉಪನ್ಯಾಸಕಿಯಾಗಿ 30 ವರ್ಷ ಸರಕಾರಿ ಸೇವೆ ಮಾಡಿ ನಿವೃತ್ತಿಯಾದವರು.
ಈ ದಂಪತಿಗಳ ಮಗಳು ಜಮ್ಮಡಲ್ಲಿಗೆ ಮದುವೆಯಾಗಿ ಕೆನಡಾ ದೇಶದಲ್ಲಿದ್ದಾರೆ. ಮಗ ಡಾ.ವಿಕ್ರಂ ಅಪ್ಪಣ್ಣ ಬೊಳಂದಂಡ ಡಾ.ಶನಿಲ್‍ನ ವಿವಾಹವಾಗಿ ಮೈಸೂರಿನಲ್ಲಿ ಕೆಲಸದಲ್ಲಿದ್ದಾರೆ.
ಅಪ್ಪಣ್ಣ ದಂಪತಿಗಳು ಮೂರು ಬಾರಿ ಅಮೆರಿಕಾ, ಕೆನಡಾ ದೇಶಕ್ಕೂ, ಯೂರೋಪ್ ಖಂಡದ 14 ದೇಶಗಳಿಗೂ ಅಧ್ಯಯನ ಪ್ರವಾಸ ಮಾಡಿ, ಪ್ರವಾಸ ವರದಿಯನ್ನು ಅಪ್ಪಣ್ಣ ಅವರು ಕೊಡವ ಭಾಷೆಯಲ್ಲೂ, ರಾಣು ಅವರು ಕನ್ನಡ ಭಾಷೆಯಲ್ಲೂ ಧಾರಾವಾಹಿಯಾಗಿ ಪ್ರಕಟ ಪಡಿಸಿದ್ದಾರೆ.
ಅಪ್ಪಣ್ಣ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ, ಪತ್ನಿ ರಾಣು ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.