ಮಡಿಕೇರಿ ಮೇ 28 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಫೀಡರ್ಗಳ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಮಡಿಕೇರಿ ನಗರ, ತಾಳತ್ಮನೆ, ಕಾಟಕೇರಿ, ಮದೆನಾಡು, ಜೋಡುಪಾಲ, ಬೋಯಿಕೇರಿ, ಮಕ್ಕಂದೂರು, ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಕೋರಿದ್ದಾರೆ.