ಮಡಿಕೇರಿ ಮೇ 28 NEWS DESK : ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಸಭೆ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್.ಭೋಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಸುಜಾಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಮತ್ತು ಅಪ್ಪಚ್ಚು ರಂಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲಿರ ಚಲನ್ ಕುಮಾರ್, ವಿ.ಕೆ.ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಡಾ.ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ ಹಾಗೂ ಸುವಿನ್ ಗಣಪತಿ ಹಾಗೂ ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಹಾಜರಿದ್ದರು.