ಮಡಿಕೇರಿ ಮೇ 28 NEWS DESK : ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯು ಎ.ಎಲ್.ಜಿ. ಕ್ರೆಸೆಂಟ್ ಶಾಲೆ(ಮಹದೇವಪೇಟೆ, ಚೌಡೇಶ್ವರಿ ದೇವಸ್ಥಾನದ ಹತ್ತಿರ, ಮಡಿಕೇರಿ)ಯಲ್ಲಿ ಜೂ.1 ರಂದು ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ.
(ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು) ಈ ವರ್ಷದ ಘೋಷಣ ವಾಕ್ಯವು “ಭೂ ಮರುಸ್ಥಾಪನೆ, ಮರುಭೂಮೀಕರಣ ಹಾಗು ಬರ ತಡೆಯುವಿಕೆ” (Land Restoration, Desertification and Drought Resilience) ಆಗಿರುತ್ತದೆ.
ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಂ.ಜಿ.ರಘುರಾಮ್, ಪರಿಸರ ಅಧಿಕಾರಿಗಳು, 9845026348, ಆಸ್ಟಿನ್ ಕೆ.ಎ. ಯೋಜನಾ ಸಹಾಯಕರನ್ನು 7760738447 (ಕಚೇರಿ: 08272-221855) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿ.ಇ.ಓ) ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಅವರು ತಿಳಿಸಿದ್ದಾರೆ.