ಮಡಿಕೇರಿ ಮೇ 28 NEWS DESK : ಸರಕಾರ ಮತ್ತು ಪದವೀಧರರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುವ ಮೂಲಕ ಪದವೀಧರರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಕೊಳ್ಳುವ ಚಿಂತನೆ ತನ್ನದೆಂದು ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ.
ಮಡಿಕೇರಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ತಾನು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದೇನೆ. ರಾಜಕೀಯ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳುವುದು ನನ್ನ ಬದ್ಧತೆಯಾಗಿದೆ ಎಂದು ಹೇಳಿದರು.
ಉದ್ಯೋಗಿಗಳಿಗೆ ಇಎಸ್‍ಐ ಮೂಲಕ ಉಚಿತ ಆರೋಗ್ಯ ಸೇವೆ ಪಡೆಯಲು 18 ಸಾವಿರ ವೇತನ ಮಿತಿ ಇದ್ದು, ಅದನ್ನು 21 ಸಾವಿರಕ್ಕೆ ಏರಿಸುವ ಪ್ರಸ್ತಾಪವಿದೆ. ಈ ನಿಟ್ಟಿನಲ್ಲಿ ವೇತನದ ಮಿತಿ ಮತ್ತಷ್ಟು ಹೆಚ್ಚಿಸಿ ಖಾಸಗಿ ವಲಯದ ಸಿಬ್ಬಂದಿಗೆ ಉಚಿತ ಆರೋಗ್ಯ ಸೇವೆ ದೊರಕಿಸಿಕೊಡುವ ಕೆಲಸ ಮಾಡಲಾಗುವುದು. ಅದರೊಂದಿಗೆ ಸರಕಾರಿ ಉದ್ಯೋಗಿಗಳಿಗಿರುವ ಜ್ಯೋತಿ ಸಂಜಿವಿನಿ ಆರೋಗ್ಯ ಸೇವೆ ಅನುದಾನಿತ, ಅನುದಾನರಹಿತ ಶಿಕ್ಷಕರಿಗೂ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆದು ಸ್ಪಂದಿಸುವ ಕೆಲಸ ತನ್ನಿಂದಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುಮಾರು 85 ಸಾವಿರ ಮತದಾರರನ್ನು ಒಳಗೊಂಡ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆ ಪಕ್ಷದ ಕಾರ್ಯಕರ್ತರ ಚುನಾವಣೆಯೇ ಆಗಿದ್ದು, ಭವ್ಯ ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕವಾಗಿ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸುವ ಮೂಲಕ ಕೈಜೋಡಿಸುವಂತೆ ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಬಿಜೆಪಿ ಪಕ್ಷವು ಸಮಥರ್Àವಾದ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿಯವರನ್ನು ನೈಋತ್ಯ ಪದವೀಧರ ಕ್ಷೇತ್ರಕ್ಕೆ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಬೋಜೇಗೌಡ ಅವರನ್ನು ಕಣಕ್ಕಿಳಿಸಿದೆ. ಈ ಇಬ್ಬರು ಅಭ್ಯರ್ಥಿಗಳು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಇವರನ್ನು ಆಯ್ಕೆ ಮಾಡಿ ಕಳುಹಿಸುವ ಮೂಲಕ ವಿಧಾನ ಪರಿಷತ್‍ನಲ್ಲಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳನ್ನು ಸಮರ್ಥವಾಗಿ ಮಂಡನೆಯಾಗಿ ಪರಿಹಾವನ್ನು ಕಂಡುಕೊಳ್ಳಲು ಸಾಧ್ಯವಿದೆ. ಎರಡು ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ನಿಶ್ಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಕಳೆದ 1988 ರಿಂದ ಇಲ್ಲಿಯವರೆಗೆ ನೈಋತ್ಯ ಪದವೀಧರರ ಕ್ಷೇತ್ರ ಬಿಜೆಪಿ ಗೆಲುವನ್ನು ಸಾಧಿಸಿಕೊಂಡು ಬಂದಿದ್ದು, ಈ ಬಾರಿಯೂ ಗೆಲುವು ಖಚಿತವೆಂದರು.
ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಪಕ್ಷದ ಅಭ್ಯರ್ಥಿಗಳು ಕೊಡಗನ್ನು ಅರ್ಥಮಾಡಿಕೊಂಡಿರುವ ವ್ಯಕ್ತಿಗಳಾಗಿದ್ದು, ಇವರನ್ನು ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಶಿಕ್ಷಕರ ಕ್ಷೇತ್ರದಿಂದ ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿರುವ ಬೋಜೇಗೌಡರು ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಎತ್ತಿ ಹಿಡಿದು ಕೆಲಸ ಮಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಖಚಿತವೆಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ತು ಸದಸ್ಯ ಡಿ.ಎಸ್.ಅರುಣ್, ರಾಜ್ಯ ಬಿಜೆಪಿ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಿ.ಕೆ.ಲೋಕೇಶ್, ನೆಲ್ಲೀರ ಚಲನ್, ಮಹೇಶ್ ಜೈನಿ, ವಕ್ತಾರರುಗಳಾದ ತಳೂರು ಕಿಶೋರ್ ಕುಮಾರ್ ಹಾಗೂ ಸುಬ್ರಮಣ್ಯ ಉಪಾಧ್ಯಯ ಉಪಸ್ಥಿತರಿದ್ದರು.
Breaking News
- *ಕೊಡಗಿನ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ : ಅಧಿಕಾರಿಗಳಿಗೆ 2 ತಿಂಗಳ ಗಡುವು*
- *ಸಿಎನ್ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ : 9 ಪ್ರಮುಖ ನಿರ್ಣಯಗಳ ಮಂಡನೆ*
- *ಮಡಿಕೇರಿ : ನ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ : ಸಿವಿಲ್ ನ್ಯಾಯಾಧೀಶೆ ಶುಭ*
- *ವಿರಾಜಪೇಟೆಯಲ್ಲಿ ನ.27 ರಂದು ಕಾವೇರಿ ಕಾರ್ನಿವಾಲ್ ಫೆಸ್ಟ್*
- *ಚೆಟ್ಟಳ್ಳಿ ಗ್ರಾ.ಪಂ ಉಪಚುನಾವಣೆ : ಅಯ್ಯಂಡ್ರ ಭಾಗೀರಥಿ ಗೆಲುವು*
- *ಸಹಕಾರ ತರಬೇತಿ (ಡಿಸಿಎಂ)ಗೆ ಅರ್ಜಿ ಆಹ್ವಾನ*
- *ತ್ಯಾಗರಾಜ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ : ಪರಿಸರರೊಂದಿಗೆ ಮಕ್ಕಳು ಬೆಳೆಯಬೇಕು : ಗೀತಾ ಗಿರೀಶ್*
- *ಮಡಿಕೇರಿಯಲ್ಲಿ ಸಂವಿಧಾನ ದಿನಾಚರಣೆ : ರಾಷ್ಟ್ರದ ಅಭಿವೃದ್ಧಿಗೆ ಸಂವಿಧಾನ ಪಾತ್ರ ಪ್ರಮುಖ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
- *ಪುತ್ತೂರು : ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ*